ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ತೌಕ್ತೆ ಚಂಡಮಾರುತ ರಾಜ್ಯಕ್ಕೆ ಅಪ್ಪಳಿಸಲಿದ್ದು, ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಲೆನಾಡು ಜಿಲ್ಲೆಗಳಲ್ಲಿ ಮುಂಜಾನೆಯಿಂದಲೇ ಮಳೆ ಆರಂಭವಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ 20 ಸೆ.ಮೀ ಗೂ ಅಧಿಕ ಮಳೆಯಾಗಲಿದೆ. ತೌಕ್ತೆ ಚಂಡಮಾರುತದ ಪರಿಣಾಮ ಮೇ 18ವರೆಗೆ ಕರಾವಳಿ ಜಿಲ್ಲೆಗಳ್ಲಲಿ ಮಳೆಯಾಗಲಿದೆ.
ತೌಕ್ತೆ ಚಂಡಮಾರುತದಿಂದ ಗಂಟೆಗೆ 150ರಿಂದ 160 ಕೀ.ಮೀ ವೇಗದಲ್ಲಿ ಗಾಳಿ ಬೀಸಲಿದೆ. 170ಕೀ.ಮೀ ವರೆಗೂ ವೇಗ ಪಡೆದುಕೊಳ್ಳುವ ಸಾಧ್ಯತೆ ಇದೆ. ಕೇರಳ ಭಾಗದಲ್ಲಿ ಭಾರಿ ನಷ್ಟವುಂಟುಮಾಡಲಿದ್ದು, 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ