ಶುಕ್ರವಾರ ಕೆಎಲ್ಇ ಸಂಸ್ಥೆಯ 103ನೇ ವಾರ್ಷಿಕೋತ್ಸವ

 

Home add -Advt

ಪ್ರಗತಿವಾಹಿನಿ ಸುದ್ದಿ

ಇಲ್ಲಿಯ ಪ್ರತಿಷ್ಠಿತ ಕರ್ನಾಟಕ ಲಿಂಗಾಯತ ಎಜುಕೇಶನ್ ಸೊಸೈಟಿಯ 103ನೇ ವಾರ್ಷಿಕೋತ್ಸವ ಶುಕ್ರವಾರ ನಡೆಯಲಿದೆ.

ಬೆಳಗ್ಗೆ 12 ಗಂಟೆಗೆ ಜೆಎನ್ಎಂಸಿಯ ಕೆಎಲ್ಇ ಸೆಂಟಿನರಿ ಕನ್ವೆನ್ಶನ್ ಸೆಂಟರ್ ನ ಡಾ.ಎಚ್.ಬಿ.ರಾಜಶೇಖರ ಸಭಾಗೃಹದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ, ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ ಪಾಲ್ಗೊಳ್ಳಲಿದ್ದಾರೆ.

ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರೂ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಸಾಧಕರಿಗೆ ಬಹುಮನ ವಿತರಿಸುವರು. ಕೆಎಲ್ಇ ಅಧ್ಯಕ್ಷ ಶಿವಾನಂದ ಕೌಜಲಗಿ ಅಧ್ಯಕ್ಷತೆ ವಹಿಸುವರು ಎಂದು ಕಾರ್ಯದರ್ಶಿ ಬಿ.ಜಿ.ದೇಸಾಯಿ ತಿಳಿಸಿದ್ದಾರೆ.

 

 

Related Articles

Back to top button