ಪ್ರಗತಿವಾಹಿನಿ ಸುದ್ದಿ; ಹಂದಿಗುಂದ: ರಾಯಬಾಗ ತಾಲ್ಲೂಕಿನ ಗಡಿ ಹಳ್ಳಿಯಾದ ಹಂದಿಗುಂದ ಗ್ರಾಮದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು ಇದನ್ನು ತಡೆಗಟ್ಟುವುದಕ್ಕಾಗಿ 1 ವಾರ ಮೇ 17 ರಿಂದ ಮೆ 24ರವರೆಗೆ ಸ್ವಯಂ ಘೋಷಿತ ಬಂದ್ ಆಚರಿಸಲು ತೀರ್ಮಾನಿಸಲಾಗಿದೆ. ಎಲ್ಲರೂ ಇದಕ್ಕೆ ಸಹಕಾರ ನೀಡಬೇಕೆಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ ಸವಿತಾ ಚಿನಗುಂಡಿ ಹೇಳಿದರು.
ಗ್ರಾಪಂ ಕಾರ್ಯಾಲಯದಲ್ಲಿ ಶನಿವಾರ ನಡೆದ ಕೋವಿಡ್ ಟಾಸ್ಕ್ ಪೋರ್ಸ್ ಸಭೆಯಲ್ಲಿ ಮಾತನಾಡಿದರು. ಇದಕ್ಕೂ ಮೊದಲು ಎರಡನೇ ವಾರ್ಡಿನ ಗ್ರಾಪಂ ಸದಸ್ಯೆ ನಿರ್ಮಲಾ ಸದಾಶಿವ ನಾವಿ ಅವರು ನಿಧನ ಹೊಂದಿರುವ ಕಾರಣ 1 ನಿಮಿಷ ಮೌನ ಆಚರಿಸಲಾಯಿತು.
ಗ್ರಾಮದಲ್ಲಿ ಹದಿನೈದು ದಿನಗಳಲ್ಲಿ ಇಪ್ಪತ್ತೈದಕ್ಕೂ ಹೆಚ್ಚು ಸಾವು ಸಂಭವಿಸಿದ್ದು ಇನ್ನೂ ಸಾವಿನ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ 1 ವಾರ ಸ್ವಯಂಪ್ರೇರಣೆಯಿಂದ ಬಂದ್ ಮಾಡುವಂತೆ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಲಾಯಿತು.
ಮಗುವಿನ ಅಪೌಷ್ಠಿಕತೆ ನಿವಾರಣೆಗೆ ಕಾಂಗರೂ ಮಾದರಿ ಆರೈಕೆ ಅಗತ್ಯ: ಡಾ. ಎಸ್ ಸಿ ಧಾರವಾಡ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ