ಪ್ರಗತಿವಾಹಿನಿ ಸುದ್ದಿ; ಪಣಜಿ: ಸಹೋದ್ಯೋಗಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್ ಪಾಲ್ ನನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಗೋವಾ ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ.
2013ರಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಿರುವ ನ್ಯಾಯಾಲಯ, ಆರೋಪಿ ತರುಣ್ ತೇಜ್ ಪಾಲ್ ನಿರ್ದೋಷಿಯಾಗಿದ್ದು, ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ ಎಂದು ತೀರ್ಪು ನೀಡಿದೆ.
2013ರಲ್ಲಿ ಗೋವಾದ ಐಷಾರಾಮಿ ಹೋಟೆಲ್ ನ ಲಿಫ್ಟ್ ನಲ್ಲಿ ಮಹಿಳಾ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ತರುಣ್ ತೇಜ್ ಪಾಲ್ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ತರುಣ್ ತೇಜ್ ಪಾಲ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಬಳಿಕ 2017ರಲ್ಲಿ ತೇಜ್ ಪಾಲ್ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್ ಗಳ ಅಡಿ ಗೋವಾ ಸೆಷನ್ ಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ಕೈಬಿಡುವಂತೆ ಕೋರಿ ತೇಜ್ ಪಾಲ್ ಸುಪ್ರೀಂಕೊರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಜಾಗೊಳಿಸಿದ್ದ ಸುಪ್ರೀಂ ಕೋರ್ಟ್ 6 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸುವಂತೆ ಸೂಚಿಸಿ ಗೋವಾ ಕೋರ್ಟ್ ಗೆ ವರ್ಗಾಯಿಸಿತ್ತು.
ಬ್ಲ್ಯಾಕ್ ಫಂಗಸ್; ಅಪಾಯದ ಮುನ್ಸೂಚನೆಯಿದ್ದರೂ ಸರ್ಕಾರದ ನಿರ್ಲಕ್ಷ್ಯ; ಹೆಚ್.ಡಿ.ಕೆ ಕಿಡಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ