Latest

ಮಾಜಿ ಸ್ಪೀಕರ್ ಕೃಷ್ಣ ವಿಧಿವಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೃಷ್ಣ ಅವರು ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಆರೋಗ್ಯದಲ್ಲಿ ಅಷ್ಟಾಗಿ ಚೇತರಿಕೆ ಕಾಣದ ಕಾರಣ ಮೈಸೂರಿನ ಅವರ ನಿವಾಸಕ್ಕೆ ವಾಪಸ್ ಕರೆತರಲಾಗಿತ್ತು ಎನ್ನಲಾಗಿದೆ. ಮೈಸೂರಿನ ಕುವೆಂಪು ನಗರದ ತಮ್ಮ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

Home add -Advt

ಜೆಡಿಎಸ್ ನಿಂದ ಸ್ಪೀಕರ್ ಆಗಿ ನೇಮಕರಾಗಿದ್ದ ಕೆ.ಆರ್.ಪೇಟೆ ಕೃಷ್ಣ ಅವರು 2006ರಿಂದ 2008ರವರೆಗೆ ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ಕೆಲ ವರ್ಷಗಳ ಹಿಂದೆ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

ಮಾಜಿ ಸ್ಪೀಕರ್ ಕೃಷ್ಣ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ ಸ್ವಗ್ರಾಮ ಕೆ.ಆರ್.ಪೇಟೆ ತಾಲೂಕಿನ ಕೊತ್ತಮಾರನಹಳ್ಳಿಯಲ್ಲಿ ನಡೆಯಲಿದೆ.
ರಾಜ್ಯಸಭೆ ಮಾಜಿ ಸದಸ್ಯ, ಖ್ಯಾತ ಶಿಲ್ಪಿ ಹಾಗೂ ಅವರ ಇಬ್ಬರು ಮಕ್ಕಳು ಕೋವಿಡ್ ಗೆ ಬಲಿ

Related Articles

Back to top button