Latest

ಮಹಾವಲಸೆಗೆ ಸಿದ್ಧತೆ ನಡೆಸಿದ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೊಂದು ಮಹಾವಲಸೆಗೆ ಸಿದ್ಧತೆ ನಡೆಸಿರುವ ಸೂಚನೆಗಳು ಕಂಡುಬರುತ್ತಿವೆ ಎಂದು ರಾಜ್ಯ ಬಿಜೆಪಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದೆ.

ಈ ಕುರಿತು ಸರಣಿ ಟ್ವೀಟ್ ಮೂಲಕ ಕಾಲೆಳೆದಿರುವ ಬಿಜೆಪಿ, ಕೋವಿಡ್ ಸಂದರ್ಭವನ್ನು ಬಳಸಿ ಮತ್ತೊಂದು ಮಹಾವಲಸೆಗೆ ಸಿದ್ದರಾಮಯ್ಯ ಸಿದ್ಧವಾಗಿರುವ ಸೂಚನೆ ಕಂಡುಬರುತ್ತಿದೆ. ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ‌ ಸೋತು, ಬಾದಾಮಿ ಕ್ಷೇತ್ರದ ಶಾಸಕರಾಗಿದ್ದರೂ ಚಾಮರಾಜಪೇಟೆ ಕ್ಷೇತ್ರದ ಮೇಲೆ ವಿಶೇಷ ಒಲವು ತೋರುತ್ತಿರುವುದರ ಹಿಂದಿನ ಉದ್ದೇಶವೇನು? ಸಿದ್ದರಾಮಯ್ಯ ಸಿಎಂ‌ ಆಗಿದ್ದಾಗ ಟಿಪ್ಪು ಜಯಂತಿ ಆಚರಣೆ, ಶಾದಿಭಾಗ್ಯ ಯೋಜನೆಯನ್ನು ಏಕೆ ಜಾರಿಗೆ ತಂದಿದ್ದು ಎಂಬುದಕ್ಕೆ ಈಗ ಉತ್ತರ ಸಿಗುತ್ತಿದೆ. ಚಾಮರಾಜಪೇಟೆಯಂಥ ಕ್ಷೇತ್ರವನ್ನು ಸಮಯ ಬಂದಾಗ ಅಪ್ಪಿಕೊಳ್ಳುವ ಉದ್ದೇಶಕ್ಕಾಗಿ ಅಲ್ಲವೇ ಎಂದು ಪ್ರಶ್ನಿಸಿದೆ.

ಕೊರೊನಾ ಬಂದ ನಂತರ ಬಾದಾಮಿ ಕ್ಷೇತ್ರಕ್ಕೆ ಎಷ್ಟು ಬಾರಿ ಭೇಟಿ ಕೊಟ್ಟಿದ್ದೀರಿ, ಎಷ್ಟು ಲಸಿಕೆ ಹಾಕಿಸಿದ್ದೀರಿ ಎಂದು ಜನರು ಪ್ರಶ್ನಿಸಿದರೆ ಸಿದ್ದರಾಮಯ್ಯನವರಿಗೆ ಸರ್ವಾಂಗವೂ ಉರಿಯುತ್ತದೆ. ಆದರೆ ಚಾಮರಾಜಪೇಟೆ ಕ್ಷೇತ್ರಕ್ಕೆ ಪದೇ ಪದೇ ಭೇಟಿ ನೀಡುವ ಹಿಂದಿನ ಉದ್ದೇಶವೇನು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದೆ.
420 ವೈದ್ಯರು ಕೊರೊನಾಗೆ ಬಲಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button