Latest

ಪೊಲೀಸರಿಗೆ ಗೃಹ ಸಚಿವ ಬೊಮ್ಮಾಯಿ ಕಟ್ಟಪ್ಪಣೆ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ರಾಜ್ಯದಲ್ಲಿ ಜಾರಿಯಾಗಿರುವ ಲಾಕ್ ಡೌನ್ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರುವಂತೆ ಪೊಲೀಸರಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಗೃಹಸಚಿವರು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶದ ಮೇರೆಗೆ ರಾಜ್ಯದಲ್ಲಿ ವಿಸ್ತರಣೆ ಯಾಗಿರುವ ಲಾಕ್ ಡೌನ್ ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕಟ್ಟುನಿಟ್ಟಿನ ಕಾರ್ಯಾಚರಣೆ ಮಾಡುವಂತೆ ಪೊಲೀಸರಿಗೆ ಸೂಚಿಸಿರುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಮೂರು-ನಾಲ್ಕು ದಿನಗಳ ಕಾಲ ನಿರಂತರವಾಗಿ ಲಾಕ್ ಡೌನ್ ಮಾಡಲಾಗುತ್ತಿದೆ. ಕೋವಿಡ್ ನಿಯಂತ್ರಣಕ್ಕಾಗಿ ಹಾಗೂ ಕೋವಿಡ್ ಹರಡುವಿಕೆಯ ಚೈನ್ ಬ್ರೇಕ್ ಮಾಡುವ ಉದ್ದೇಶದಿಂದ ಲಾಕ್ ಡೌನ್ ಪರಿಣಾಮಕಾರಿಯಾಗಿ ಜಾರಿಯಾಗಬೇಕಾಗಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಮಹಾವಲಸೆಗೆ ಸಿದ್ಧತೆ ನಡೆಸಿದ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button