ಪ್ರಗತಿವಾಹಿನಿ ಸುದ್ದಿ, ಕಾರವಾರ – ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮೇ 24 ರಿಂದ ಜೂನ್ 7ರವರೆಗೆ ಸರಕಾರ ವಿಧಿಸಿರುವ ಕರ್ಫ್ಯೂ ನಿಯಮಗಳಿಗೆ ಮತ್ತುಷ್ಟು ಕ್ರಮಗಳನ್ನು ಸೇರ್ಪಡೆಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಭಾನುವಾರ ಆದೇಶ ಹೊರಡಿಸಿದ್ದಾರೆ.
ಮೇ 24 ರ ಬೆಳಗ್ಗೆ 6 ಗಂಟೆಯಿಂದ ಜೂನ್ 7 ರ ಬೆಳಗ್ಗೆ 6 ಗಂಟೆಯವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಪ್ರತಿ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ತರಕಾರಿ, ದಿನಸಿ ಮತ್ತಿತರ ಜೀವನಾವಷ್ಯಕ ವಸ್ತುಗಳನ್ನು ಅಂಗಡಿಗಳಿಗೆ ತೆರಳಿ ಖರೀದಿ ಮಾಡಲು ಅವಕಾಶವಿದ್ದು ಉಳಿದ ದಿನಗಳಲ್ಲಿ ಮನೆಮನೆಗೆ ಪೂರೈಕೆ ಮಾಡಲಾಗುತ್ತದೆ.
ಮದುವೆ ಕಾರ್ಯಗಳಿಗೆ ಅನುಮತಿ ನೀಡಲಾಗುವುದಿಲ್ಲ. ಸೂಕ್ತ ಗುರುತಿನ ಚೀಟಿ ಹೊಂದಿರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ