Latest

ಮೈಸೂರಲ್ಲಿ ನಿತ್ಯ 4 -5 ಮಕ್ಕಳಲ್ಲಿ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಮೈಸೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಟ್ಟಹಾಸದ ನಡುವೆ ಮೂರನೇ ಅಲೆ ಕೂಡ ವಕ್ಕರಿಸಿದೆಯಾ ಎಂಬ ಆತಂಕ ಎದುರಾಗಿದೆ. ಚಿಕ್ಕ ಮಕ್ಕಳಲ್ಲಿಯೂ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಮೈಸೂರು ಜಿಲ್ಲೆಯಲ್ಲಿ ಪ್ರತಿದಿನ 4-5 ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಲುತ್ತಿದೆ.

ಜಿಲ್ಲೆಯಲ್ಲಿ ಮಕ್ಕಳಲ್ಲಿ ಹರಡುತ್ತಿರುವ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಇದೀಗ ಪಾಲಿಕೆ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು, ಪೀಡಿಯಾಟ್ರಿಕ್ ಕೋವಿಡ್ ಕೇರ್ ಆರಂಭಿಸಿದೆ.

ಕೋವಿಡ್ ಟೆಲಿಕೇರ್ ಆರಂಭಿಸಿ ಹೋಂ ಐಸೋಲೇಷನ್, ಸೋಂಕಿನ ಲಕ್ಷಣಗಳಿರುವವರಿಗೆ ದೂರವಾಣಿ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಇದಕ್ಕಾಗಿ ವಿವಿಧ ಸಂಘ-ಸಂಸ್ಥೆ ಸಹಯೋಗದಲ್ಲಿ ಐಡಿಯಲ್ ಜಾವಾ ರೋಟರಿ ಶಾಲೆಯಲ್ಲಿ ಕಾಲ್ ಸೆಂಟರ್ ವೊಂದನ್ನು ತೆರೆದಿದೆ. ಅಗತ್ಯವಿರುವವರಿಗೆ ಔಷಧಿ ಕಿಟ್ ಗಳನ್ನು ವಿತರಿಸಲಾಗುತ್ತಿದೆ. ಒಟ್ಟಾರೆ ರಾಜ್ಯದಲ್ಲಿ ಹಲವು ಮಕ್ಕಳಲ್ಲಿ ಕೂಡ ಸೋಂಕಿನ ಲಕ್ಷಣ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

 

ಅತಿಯಾಸೆ ಗತಿಕೇಡು…..

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button