Latest

ನಾಯಕತ್ವ ಬದಲಾವಣೆ ಮಾತು; ಆಪ್ತ ಸಚಿವರ ಬಳಿ ಸಿಎಂ ಬೇಸರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಮಾತುಗಳು ಕೇಳಿಬರುತ್ತಿದ್ದು, ಈ ಕುರಿತು ಸ್ವತ: ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ್ದಾರೆ.

ಸಿಎಂ ಸ್ಥಾನಕ್ಕೆ ಕೆಲ ನಾಯಕರ ಹೆಸರು ಕೇಳಿಬರುತ್ತಿದೆ. ಪ್ರತಿನಿತ್ಯ ನನ್ನ ಬಳಿ ಬರುವವರ, ಜತೆಯಲ್ಲಿಯೇ ಇರುವವರ ಹೆಸರೇ ಕೇಳಿಬರುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಆಪ್ತ ಸಚಿವರ ಬಳಿ ಚರ್ಚೆ ವೇಳೆ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಈ ನಡುವೆ ಜೂನ್ 7ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ. ಆದರೆ ಶಾಕಾಂಗ ಪಕ್ಷದ ಸಭೆ ಬಗ್ಗೆ ಸಿಎಂ ಶಾಸಕರಿಗಾಗಲಿ, ಆಡಳಿತ ಪಕ್ಷದ ಮುಖ್ಯಸಚೇತಕರಿಗಾಗಲಿ ಯಾವುದೇ ಮಾಹಿತಿ ನೀಡಿಲ್ಲ. ಆದರೆ ಹೈಕಮಾಂಡ್ ಸೂಚನೆ ಮೇರೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಒಟ್ಟಾರೆ ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಮಾತುಗಳು ಮುನ್ನೆಲೆಗೆ ಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button