ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜಿಂದಾಲ್ ಸಂಸ್ಥೆಗೆ ನೀಡಿದ್ದ ಭೂಮಿಯನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಭೂಮಿ ಪರಭಾರೆ ಪ್ರಕ್ರಿಯೆಗೆ ತಾತ್ಕಾಲಿಕ ತಡೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು.
ಈ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದು, ಜಿಂದಾಲ್ ಗೆ ಭೂಮಿ ನೀಡುವ ಕ್ರಮಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದರು. ಜಿಂದಾಲ್ ಗೆ 3,667 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಈ ಬಗ್ಗೆ ಸರ್ಕಾರದ ಕೆಲ ಸಚಿವರು ಮಾತ್ರವಲ್ಲ, ವಿಪಕ್ಷಗಳಿಂದಲೂ ತೀವ್ರ ವಿರೋಧ ವ್ಯಕ್ತವಾಗಿತ್ತು.
ಅಲ್ಲದೇ ಬಿಜೆಪಿ ಕೆಲ ಶಾಸಕರು ಸರ್ಕಾರದ ಕ್ರಮದ ಬಗ್ಗೆ ಹೈಕಮಾಂಡ್ ಗೆ ದೂರು ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಂದಾಲ್ ಸಂಸ್ಥೆಗೆ ಭೂಮಿ ನೀಡುವ ನಿರ್ಧಾರ ಕೈಬಿಡಲು ತೀರ್ಮಾನಿಸಲಾಗಿದೆ.
ರಮೇಶ್ ಜಾರಕಿಹೊಳಿ ಬಂಧನಕ್ಕೆ ಕಾಂಗ್ರೆಸ್ ಪಟ್ಟು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ