ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನೋಂದಾಯಿತ ಖಾಸಗಿ ಆಸ್ಪತ್ರೆಗಳ ಕಾಯ್ದಿರಿಸಿದ ಹಾಸಿಗೆಗಳಲ್ಲಿ ಕೋವಿಡ್-19 ಸೋಂಕಿತರು ಉಚಿತ ಚಿಕಿತ್ಸೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಸರ್ಕಾರದ ನಿರ್ದೇಶನದಂತೆ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 50 ರಷ್ಟು ಹಾಸಿಗೆಗಳನ್ನು ಕೋವಿಡ್-19 ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಕಾಯ್ದಿರಿಸಲಾಗಿದೆ ಎಂದಿದ್ದಾರೆ.
ಜಿಲ್ಲೆಯಲ್ಲಿ 06 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, 9 ತಾಲೂಕಾ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಕೋವಿಡ್-19 ರ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸರಕಾರಿ ಆಸ್ಪತ್ರೆಗಳಲ್ಲಿ ಕೋವಿಡ್-19 ರ ಸೋಂಕಿತರಿಂದ ಹಾಸಿಗೆಗಳು ಭರ್ತಿಯಾಗುತ್ತಿದ್ದರೂ ಕೂಡ ಆಸ್ಪತ್ರೆಗಳಿಗೆ ಸೋಂಕಿತರು ಹೆಚ್ಚಾಗಿ ಚಿಕಿತ್ಸೆಗೆ ಬರುತ್ತಿದ್ದಾರೆ. ಆದ್ದರಿಂದ, ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಹಾಸಿಗೆ ಹಾಗೂ ಉಚಿತ ಚಿಕಿತ್ಸೆ ದೊರಕುವಂತೆ ಜಿಲ್ಲಾಡಳಿತವು ಕ್ರಮ ವಹಿಸುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಹಾಸಿಗೆಗಳ (Bed’s) ಲಭ್ಯತೆ ಹಾಗೂ ಹಂಚಿಕೆ ಕುರಿತು ಮಾಹಿತಿಯನ್ನು ಜಿಲ್ಲಾ ಕೋವಿಡ್ ವಾರ್ ರೂಂ ನ ದೂರವಾಣಿ ಸಂಖ್ಯೆ 0831-2436960 ನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಕೋವಿಡ್ ವರದಿ; ಬೆಳಗಾವಿಯಲ್ಲಿ ಓರ್ವನ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ