ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಆರೋಗ್ಯ ಸಚಿವರೇ ಭಾಗಿಯಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ವಿರುದ್ಧ ಐಎಂಎ ಮಾಜಿ ಅಧ್ಯಕ್ಷ ಹೆಚ್.ಎನ್.ರವೀಂದ್ರ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ರವೀಂದ್ರ, ಆರೋಗ್ಯ ಸಚಿವ ಸುಧಾಕರ್ ಅವರೇ ಬೆಡ್ ಬ್ಲಾಕಿಂಗ್ ನಲ್ಲಿ ಶಾಮೀಲಾಗಿದ್ದಾರೆ. ಏರ್ ಪೋರ್ಟ್ ರಸ್ತೆಯಲ್ಲಿರುವ ಆಸ್ಟರ್ ಆಸ್ಪತ್ರೆಯಲ್ಲಿ ಬೆಡ್ ಬ್ಲಾಕ್ ಮಾಡಿಸಿದ್ದು, ವಾರ್ ರೂಂ ಪ್ರಕಾರ ಇವತ್ತಿಗೂ ಅಲ್ಲಿ ಬೆಡ್ ಖಾಲಿ ಇಲ್ಲ. ಆದರೆ ವಾಸ್ತವದಲ್ಲಿ ಆಸ್ಟರ್ ಆಸ್ಪತ್ರೆಯಲ್ಲಿ ಬೆಡ್ ಖಾಲಿಯಿದೆ ಕೊರೊನಾದಿಂದ ಜನರು ಆಸ್ಪತ್ರೆ, ಆಕ್ಸಿಜನ್ ಸಿಗದೇ ಪರದಾಡುತ್ತಿದ್ದರೂ ಆರೋಗ್ಯ ಸಹಿವರಿಂದಲೇ ಇಂತಹ ಪ್ರಕರಣ ನಡೆಯುತ್ತಿರುವುದು ದುರಂತ ಎಂದು ಕಿಡಿಕಾರಿದ್ದಾರೆ.
ಸಚಿವರಿಂದಲೇ ಅಧಿಕಾರ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ವೈದ್ಯರಾಗಿ, ಆರೋಗ್ಯ ಸಚಿವರಾಗಿ ಮಂತ್ರಿ ಸ್ಥಾನದಲ್ಲಿರಲು ಲಾಯಕ್ಕಿಲ್ಲ. ಒಂದು ವೇಳೆ ಸಚಿವ ಸುಧಾಕರ್ ಪ್ರಾಮಾಣಿಕವಾಗಿದ್ದರೆ ಶ್ವೇತಪತ್ರ ಹೊರಡಿಸಲಿ ಎಂದು ಸವಾಲು ಹಾಕಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ ಕುಮಾರಸ್ವಾಮಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ