Latest

ಗ್ಯಾಂಗ್ ರೇಪ್ ಪ್ರಕರಣ; ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ಯುವತಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಇಂತ ಅಮಾನುಷ ಕೃತ್ಯವನ್ನು ಸಹಿಸಲಾಗದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇದೊಂದು ಅಮಾನವೀಯ ಕೃತ್ಯ. ತಪ್ಪಿತಸ್ಥರವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಗೃಹ ಸಚಿವರು, ಪೊಲೀಸರಿಗೆ ಸೂಚಿಸಿದ್ದಾರೆ ಎಂದರು.

Home add -Advt

ಬಾಂಗ್ಲಾದಿಂದ ಅಕ್ರಮವಾಗಿ ಭಾರತಕ್ಕೆ ಆಗಮಿಸಿ, ಬೆಂಗಳೂರಿನ ರಾಮನಗರದಲ್ಲಿ ವಾಸವಾಗಿದ್ದ ಯುವತಿ ಮೇಲೆ ಬಾಂಗ್ಲಾ ಮೂಲದ ಆಕೆಯ ಸ್ನೇಹಿತರ ಗುಂಪೆ ಸಾಮೂಹಿಕ ಅತ್ಯಾಚಾರ ನಡೆಸಿ, ವಿಡಿಯೋ ರೆಕಾರ್ಡ್ ಮಾಡಿ ವೈರಲ್ ಮಾಡಿತ್ತು.
ಗ್ಯಾಂಗ್ ರೇಪ್ ಆರೋಪಿಗಳ ಮೇಲೆ ಪೊಲೀಸರ ಫೈರಿಂಗ್

Related Articles

Back to top button