Latest

ಗ್ಯಾಂಗ್ ರೇಪ್ ಪ್ರಕರಣ; 6 ಜನರ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಕೆಲ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ವಿಡಿಯೋ ವೈರಲ್ ಆದ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಪೊಲೀಸರು ಈ ಪ್ರಕರಣವನ್ನು ಬೇಧಿಸಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದಾರೆ. ಅದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದರು.

ಅಪರಾಧ ಎಸಗಿದವರು ಈಶಾನ್ಯ ರಾಜ್ಯಗಳಿಂದ ಬಂದವರು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದರು. ವೈರಲ್ ಆದ ವಿಡಿಯೋ ಆಧಾರವಾಗಿಟ್ಟುಕೊಂಡು ಬೆಂಗಳೂರು ಪೊಲೀಸರು ವಿಚಾರಣೆ ಆರಂಭಿಸಿದರು. ಈ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಭೇದಿಸಿದ್ದಾರೆ. ಪ್ರಕರಣದಲ್ಲಿ ನಾಲ್ವರು ಯುವಕರು ಮತ್ತು ಇಬ್ಬರು ಮಹಿಳೆಯರು ಭಾಗಿಯಾಗಿದ್ದಾರೆ. ಅವರು ನೀಡಿರುವ ಹೇಳಿಕೆ ಪ್ರಕಾರ ಇನ್ನೂ ಕೆಲ ಆರೋಪಿಗಳು ಕೇರಳದಲ್ಲಿ ಇದ್ದಾರೆ. ಅವರನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರಿಗೆ ಈ ಪ್ರಕರಣದ ಮೇಲುಸ್ತುವಾರಿ ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.

ಗ್ಯಾಂಗ್ ರೇಪ್ ಆರೋಪಿಗಳ ಮೇಲೆ ಪೊಲೀಸರ ಫೈರಿಂಗ್

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button