Kannada NewsLatest

ಜೂನ್ 30ರವರೆಗೆ ಲಾಕ್ಡೌನ್? : ಕೇಂದ್ರ ಗೃಹ ಇಲಾಖೆ ಸೂಚನೆ ನೋಡಿ

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಜೂನ್ 30ರ  ವರೆಗೂ ಲಾಕ್ಡೌನ್ ಮುಂದುವರಿಸುವಂತೆ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಲಹೆಯ ಪ್ರಕಾರ ಜೂನ್ 30ರ ವರೆಗೆ ಎಲ್ಲ ರೀತಿಯ ನಿಯಮಗಳು ಮುಂದುವರಿಯಲಿವೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ಕಠಿಣ ನಿಯಮಗಳಿಂದ ಮಾತ್ರ ದೇಶದಲ್ಲಿ ಕೊರೋನಾ ಪ್ರಮಾಣ ಇಳಿಮುಖ ಸಾಧ್ಯ. ಸಧ್ಯಕ್ಕೆ ಎಲ್ಲ ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೋನಾ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಎಲ್ಲ ಕಠಿಣನಿಯಮಗಳನ್ನೂ ಜೂನ್ 30ರವರೆಗೆ ಮುಂದುವರಿಸುವುದು ಸೂಕ್ತ. ಯಾವುದೇ ರೀತಿಯ ಸಡಿಲಿಕೆ ಬಗ್ಗೆ ಅಲ್ಲಿನ ಪರಿಸ್ಥಿತಿಯನ್ನು ನೋಡಿ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದೆ.

ಈ ವಿಷಯದಲ್ಲಿ ರಾಜ್ಯಗಳು ತಮ್ಮ ತಮ್ಮ ಜಿಲ್ಲಾಡಳಿತಗಳಿಗೆ ಸೂಕ್ತ ನಿರ್ದೇಶನ ನೀಡಿ ಕೊರೋನಾ ನಿಯಂತ್ರಣಕ್ಕೆ ಕಠಿಣ ನಿಯಮಗಳನ್ನು ಜೂನ್ 30ರ ವರೆಗೂ ಮುಂದುವರಿಸುವಂತೆ ಸೂಚಿಸಬೇಕು ಎಂದು ಕೇಂದ್ರ ತಿಳಿಸಿದೆ.

ಈ ಸಂಬಂಧ ರಾಜ್ಯ ಸರಕಾರ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದೆ ಕಾದು ನೋಡಬೇಕಿದೆ. ರಾಜ್ಯದಲ್ಲಿ ಜೂನ್ 7ರ  ವರೆಗೆ ಲಾಕ್ಡೌನ್ ಇದೆ. ಅದನ್ನು ಮುಂದುವರಿಸಲಾಗುವುದೋ ಅಥವಾ ಅಲ್ಲಿಗೇ ಕೊನೆಗೊಳಿಸಲಾಗುವುದೋ -ನಿರ್ಧಾರ ಇನ್ನೂ ಹೊರಬಿದ್ದಿಲ್ಲ.

ಕೆಲವು ವಲಯಗಳಿಗೆ ವಿನಾಯಿತಿ ನೀಡಿ, ಸೆಮಿ ಲಾಕ್ಡೌನ್ ನ್ನು ರಾಜ್ಯದಲ್ಲಿ ಜೂನ್ ಅಂತ್ಯದವರೆಗೂ ಮುಂದುವರಿಸುವ ಸಾಧ್ಯತೆ ಇದೆ.

ಸಂತ್ರಸ್ತ ಯುವತಿಯೇ ವೇಶ್ಯಾವಾಟಿಕೆ ದಂಧೆ ಕಿಂಗ್ ಪಿನ್…?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button