ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಬಿಗಿ ಕ್ರಮ ಜೂನ್ 7ರ ಬಳಿಕ ಸಡಿಲವಾಗುವ ಸಾಧ್ಯತೆ ಇದೆ. ಈ ಕುರಿತು ಸುಳಿವು ನೀಡಿದ ಸಿಎಂ ಬಿ.ಎಸ್.ಯಡಿಯೂರಪ್ಪ ಪರಿಸ್ಥಿತಿ ನೋಡಿಕೊಂಡು ನಿರ್ಧರಿಸುವುದಾಗಿ ತಿಳಿಸಿದ್ದಾರೆ.
5 ಜಿಲ್ಲೆಗಳ ಅಧಿಕಾರಿಗಳ ಜೊತೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೊವಿಡ್ ಸಂಖ್ಯೆ ಹೆಚ್ಚುತ್ತಿರುವ ಜಿಲ್ಲೆಗಳ ಅಧಿಕಾರಿಗಳ ಜೊತೆ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಹಾಗೂ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಿದ್ದೇವೆ. ಲಸಿಕೆ ಹಂಚಿಕೆ ಬ್ಲ್ಯಾಕ್ ಫಂಗಸ್ ಗೆ ಔಷಧಿ ಪೂರೈಕೆ ನಿಟ್ಟಿನಲ್ಲೂ ಚರ್ಚಿಸಲಾಗಿದೆ ಎಂದರು.
ರಾಜ್ಯದಲ್ಲಿ ಈಗಿರುವ ಲಾಕ್ ಡೌನ್ ಬಿಗಿ ಕ್ರಮ ಜೂನ್ 7ರವರೆಗೂ ಇರಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇರಲ್ಲ. ಜನರು ಸಹಕಾರ ನೀದಿದರೆ ಜೂನ್ 7ರ ಬಳಿಕ ಲಾಕ್ ಡೌನ್ ವಿಸ್ತರಣೆ ಅಗತ್ಯವಿರುವುದಿಲ್ಲ. ಪರಿಸ್ಥಿತಿ ನೋಡಿಕೊಂಡು ಈ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದರು.
ಲಾಕ್ ಡೌನ್ ವಿಸ್ತರಣೆ; ಗೃಹ ಸಚಿವರ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ