Latest

ಬಿ.ವೈ.ವಿಜಯೇಂದ್ರ ದಿಢೀರ್ ದೆಹಲಿಗೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಜ್ಯ ಬಿಜೆಪಿ ಉಪಾಧ್ಯಕ್ಷ, ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ರಾಜ್ಯ ರಾಜಕಿಯದಲ್ಲಿ ಮತ್ತೆ ಸಂಚಲನಕ್ಕೆ ಕಾರಣವಾಗಿದೆ.

ಸಚಿವ ಸಿ.ಪಿ.ಯೋಗೇಶ್ವರ್ ದೆಹಲಿ ಭೇಟಿ, ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಇದೀಗ ಬಿ.ವೈ ವಿಜಯೇಂದ್ರ ತಮ್ಮ ಆಪ್ತರ ಜೊತೆಗೆ ದೆಹಲಿಗೆ ತೆರಳಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಜಯೇಂದ್ರ ಇದು ಯಾವುದೇ ರಾಜಕೀಯ ಉದ್ದೇಶಿತ ಭೇಟಿಯಲ್ಲ, ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.

ಅನಾರೋಗ್ಯಕ್ಕೀಡಾದ ವಿಪಕ್ಷ ನಾಯಕ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button