Latest

ಜೂನ್ 7ರ ಬಳಿಕ ಅನ್ ಲಾಕ್ ನಿಶ್ಚಿತ, ಆದರೆ…. – ಡಿಸಿಎಂ ಅಶ್ವತ್ಥನಾರಾಯಣ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಜಾರಿಯಾಗಿದ್ದ ಲಾಕ್ ಡೌನ್ ಜೂನ್ 7ರಂದು ಅಂತ್ಯಗೊಳ್ಳುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಡಿಸಿಎಂ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 7ರ ಬಳಿಕ ಅನ್ ಲಾಕ್ ನಿಶ್ಚಿತ. ಆದರೆ ಪೂರ್ಣ ಪ್ರಮಾಣದಲ್ಲಿ ಅನ್ ಲಾಕ್ ಮಾಡುವುದಿಲ್ಲ. ಕೊರೊನಾ ಸೋಂಕು ಯಾವ ಯಾವ ಜಿಲ್ಲೆಗಳಲ್ಲಿ ನಿಯಂತ್ರಣಕ್ಕೆ ಬಂದಿದೆ ಎಂಬುದನ್ನು ಪರಿಶೀಲಿಸಿ ಲಾಕ್ ಡೌನ್ ತೆರವುಗೊಳಿಸಲಾಗುವುದು ಎಂದರು.

Home add -Advt

ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ನಡೆಯಲಿದ್ದು, ಈ ಬಗ್ಗೆ ತಜ್ಞರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅರುಣ್ ಸಿಂಗ್ ಭೇಟಿಯಾದ ಬಿ.ವೈ.ವಿಜಯೇಂದ್ರ

Related Articles

Back to top button