Latest

ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ರದ್ದು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಸಿಬಿಎಸ್ ಇ ಮತ್ತು ಸಿಐಎಸ್ ಸಿಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸುವುದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ನೂರಾರು ವಿದ್ಯಾರ್ಥಿಗಳು ಪರೀಕ್ಷೆ ನಡೆಸದಂತೆ ಕೋರಿ ಸುಪ್ರೀಂ ಕೋರ್ಟ್ ಗೂ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಶಿಕ್ಷಣ ಸಚಿವರ ನೇತೃತ್ವದಲ್ಲಿ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಅನೇಕ ಸಚಿವರು ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದರೆ ಕೆಲವರು ಮಾತ್ರ ವಿರೋಧ ವ್ಯಕ್ತಪಡಿಸಿದ್ದರು. ಪರೀಕ್ಷೆಗೆ ಸಂಬಂಧಿಸಿದಂತೆ ಇದೀಗ ಪ್ರಧಾನಿ ಮೋದಿ ಅಂತಿಮವಾಗಿ ತೀರ್ಮಾನ ಕೈಗೊಂಡಿದ್ದು, ಪರೀಕ್ಷೆ ನಡೆಸದಿರಲು ಮುಂದಾಗಿದ್ದಾರೆ.

ಇಂದು ಪ್ರಧಾನಿ ನೇರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತಾಧಿಕಾರಿಗಳ ಮಹತ್ವದ ಸಭೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಪಡಿಸಲು ನಿರ್ಧರಿಸಲಾಯಿತು.

ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ವೃದ್ಧ ಆತ್ಮಹತ್ಯೆ

Home add -Advt

Related Articles

Back to top button