ಪ್ರಗತಿವಾಹಿನಿ ಸುದ್ದಿ, ದಾಂಡೇಲಿ – ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗ್ರಾಮೀಣ ಪೊಲೀಸ್ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಖೋಟಾನೋಟು ವ್ಯವಹಾರ ಮಾಡುತ್ತಿದ್ದ 6 ಜನರನ್ನು ಬಂಧಿಸಲಾಗಿದೆ. ಬಂಧಿತರಿಂದ 4.5 ಲಕ್ಷ ಅಸಲಿ ನೋಟು, 72 ಲಕ್ಷದ ಖೋಟಾ ನೋಟು ವಶಕ್ಕೆ ಪಡೆಲಾಗಿದೆ.
ಮಹಾರಾಷ್ಟ್ರದ ಕಿರಣ ದೇಸಾಯಿ(40), ಗಿರೀಶ ಪೂಜಾರಿ(42), ಬೆಳಗಾವಿಯ ಅಮರ ನಾಯ್ಕ(30), ಸಾಗರ ಕುಣ್ಣೂರ್ಕರ್(28), ದಾಂಡೇಲಿಯ ಶಬ್ಬೀರ್ ಕುಟ್ಟಿ(45), ಶಿವಾಜಿ ಕಾಂಬ್ಳೆ(52) ಬಂಧನಕ್ಕೊಳಗಾದವರು.
ಡಿಡಿಎಲ್ ವನಶ್ರೀ ಭಾಗದ ಶಿವಾಜಿ ಕಾಂಬ್ಳೆ ಎನ್ನುವವರ ಮನೆಯಲ್ಲಿ ವಶಕ್ಕೆ ಪಡೆಯಲಾಗಿದೆ. 4.5 ಲಕ್ಷ ಅಸಲಿ ನೋಟು ಪಡೆದು 9 ಲಕ್ಷ ನಕಲಿ ನೋಟು ನೀಡಲು ಮುಂದಾಗಿದ್ದ ವೇಳೆ ದಾಳಿ ನಡೆಸಲಾಗಿದೆ.
ವ್ಯವಹಾರಕ್ಕೆ ಬಳಸಿದ್ದ ಎರಡು ಕಾರು ವಶಪಡಿಸಿಕೊಂಡಿದ್ದಾರೆ. ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ್ ಕಾರ್ಯವನ್ನು ಎಸ್ಪಿ ಪ್ರಶಂಸಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ