Kannada NewsLatest

ಚಿಂಚಲಿ ಗ್ರಾಮದಲ್ಲಿ 70 ಜನರ ಸಾವು; ಬೆಚ್ಚಿಬಿದ್ದ ಜನರು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹಳ್ಳಿ ಹಳ್ಳಿಗಳಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಈ ನಡುವೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ 70 ಜನರು ಸಾವನ್ನಪ್ಪಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ.

ಚಿಂಚಲಿ ಗ್ರಾಮದಲ್ಲಿ ಕಳೆದ 20 ದಿನಗಳಲ್ಲಿ 70 ಜನರು ಸಾವನ್ನಪ್ಪಿದ್ದು, ಅವರಲ್ಲಿ 22 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಅಧಿಕೃತವಾಗಿ ದಾಖಲಾಗಿದೆ. ಇತರರು ಬೇರೆ ಬೇರೆ ಕಾರಣಗಳಿಂದ ಸಾವಿಗೀಡಾಗಿದ್ದಾರೆ.

Home add -Advt

ಗ್ರಾಮದಲ್ಲಿ ಇನ್ನೂ 40ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ತಗುಲಿದ್ದು, ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮದಲ್ಲಿ ಪ್ರತಿದಿನ ಕೊರೊನಾ ಸೋಂಕಿಗೆ 2-3 ಜನರು ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಕೊರೊನಾ ಬಗ್ಗೆ ಕೋಡಿಮಠದ ಶ್ರೀಗಳಿಂದ ಭಯಂಕರ ಭವಿಷ್ಯ

ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ನಿರ್ಧಾರ

Related Articles

Back to top button