Latest

ವಾರದಲ್ಲಿ ಸರಕಾರಕ್ಕೆ ಟಾಸ್ಕ್ ಫೋರ್ಸ್ ವರದಿ – ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಕೊರೋನಾ 2ನೇ ಅಲೆ ತನ್ನ ಅಬ್ಬರವನ್ನು ಕಡಿಮೆ ಮಾಡಿದಂತೆ ಕಾಣುತ್ತಿದೆ. ಆದರೆ ಸಾವಿನ ಪ್ರಮಾಣ ಇನ್ನೂ ತಗ್ಗಬೇಕಿದೆ. ದಿನನಿತ್ಯ ಬರುವ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.

ಈ ಮಧ್ಯೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಜ್ಞರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಬರಬಹುದಾದ 3ನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದೆ.

ಡಾ.ದೇವಿ ಶೆಟ್ಟ ನೇತೃತ್ವದ ಟಾಸ್ಕ್ ಫೋರ್ಸ್ 3ನೇ ಅಲೆ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಒಂದು ವಾರದಲ್ಲಿ ಸರಕಾರಕ್ಕೆ ಸಲಹೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

3ನೇ ಅಲೆ ಕುರಿತು ಹಲವರು ಹಲವು ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕೆಲವರು ವ್ಯಾಕ್ಸಿನೇಶನ್ ಮತ್ತು ಜನರ ಮುಂಜಾಗ್ರತೆಯಿಂದ 3ನೇ ಅಲೆ ಅಷ್ಟೊಂದು ತೀವ್ರವಾಗಿರುವುದಿಲ್ಲ ಎಂದು ಅಭಿಪ್ರಾಯಪಟ್ಟರೆ, ಕೆಲವರು 2ನೇ ಅಲೆಗಿಂತಲೂ ತೀವ್ರವಾಗಿರಲಿದೆ ಎನ್ನುತ್ತಿದ್ದಾರೆ. ಇನ್ನು ಕೆಲವರು 3ನೇ ಅಲೆ ಮಕ್ಕಳಿಗೆ ಮಾರಕವಾಗಲಿದೆ ಎನ್ನುವ ಎಚ್ಚರಿಕೆ ನೀಡಿದ್ದಾರೆ.

ಹಾಗಾಗಿ ಸರಕಾರ 3ನೇ ಅಲೆಯ ಸಾಧ್ಯತೆಯನ್ನು ಗಂಭೀರವಾಗಿ ಪರಿಗಣಿಸಿದೆೆ. 2ನೇ ಅಲೆಯಲ್ಲಾದ ವೈಫಲ್ಯ 3ನೇ ಅಲೆಯಲ್ಲಾಗಬಾರದು ಎನ್ನುವ ಕಾರಣಕ್ಕಾಗಿ ಈಗಲೇ ಕ್ರಮಗಳನ್ನು ಆರಂಭಿಸಿದೆ.

ಕೊರೊನಾವೈರಸ್ ಮಹಾಮಾರಿಯಿಂದ ಮಗುವನ್ನು ಹೇಗೆ ರಕ್ಷಿಸುವುದು?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button