Kannada NewsKarnataka News

ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಹೋಂ ಐಸೋಲೇಶನ್ ಕಿಟ್ ವಿತರಿಸಿದ ಲಕ್ಷ್ಮಿ ಹೆಬ್ಬಾಳಕರ್ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -​ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧ ಕೋವಿಡ್ ಕೇರ್ ಸೆಂಟರ್ ಹಾಗೂ ಸ್ವ್ಯಾಬ್ ಟೆಸ್ಟಿಂಗ್ ಕೇಂದ್ರಗಳಿಗೆ ಗುರುವಾರ ಭೇಟಿ ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಸೋಂಕಿತರಿಗೆ ಧೈರ್ಯ ತುಂಬಿ, ​ಹೋಂ ಐಸೋಲೇಶನ್ ಕಿಟ್ ಗಳನ್ನು ವಿತರಿಸಿದರು.
 ಮೊದಗಾ ಗ್ರಾಮದ ನಿರ್ಮಲ ನಗರದಲ್ಲಿರುವ ಕಾರ್ಡಿನಲ್ ಗ್ರೇಸಿಯಸ್ ಆಸ್ಪತ್ರೆಯ ಕೋವಿಡ್ ಸೋಂಕಿತರ ಕೇಂದ್ರಕ್ಕೆ ಭೇಟಿ ನೀಡಿ ಸೋಂಕಿತರ ಆರೋಗ್ಯದ ಬಗ್ಗೆ ವಿಚಾರಿಸಿ ಆತ್ಮಸ್ಥೈರ್ಯವನ್ನು ತುಂಬಿದರು.
ಈ ಸಂದರ್ಭದಲ್ಲಿ ಸೋಂಕಿತರಿಗೆ ಹಣ್ಣು ಹಂಪಲಗಳನ್ನು ವಿತರಿಸಿ, ಸರಿಯಾದ ಚಿಕಿತ್ಸೆ ದೊರೆಯುತ್ತಿರುವ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ​ರು. ಅಗತ್ಯ ಔಷಧೋಪಚಾರಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ​ರು​.
​ ಕ್ಷೇತ್ರದ ಮಾವಿನಕಟ್ಟಿ ಗ್ರಾಮದ ​ ಗಂಟಲು ದ್ರವಗಳ (ಸ್ವ್ಯಾಬ್ ಟೆಸ್ಟಿಂಗ್) ಮಾದರಿಯನ್ನು ಸಂಗ್ರಹಿಸುವ ಕೇಂದ್ರಕ್ಕೆ ಭೇಟಿ​ ​ನೀಡಿ ಗ್ರಾಮ​ಸ್ಥರ ಆರೋಗ್ಯದ ಬಗ್ಗೆ ವಿಚಾರಿಸಿ, ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಕೋವಿಡ್ ಹೋಮ್ ಐಸೋಲೇಷನ್ ಕಿಟ್ ಗಳನ್ನು ವಿತರಿಸಿದ​ರು​.
ಹೆಚ್ಚಿನ ಪ್ರಮಾಣದಲ್ಲಿ ಗಂಟಲು ದ್ರವಗಳ ಮಾದರಿಯನ್ನು ಸಂಗ್ರಹಿಸುವಂತೆ​ ಹಾಗೂ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆಗಳ​ನ್ನು​ ಪೂರೈ​ಸುವಂತೆ ಸಿಬ್ಬಂದಿಗೆ ನಿರ್ದೇಶನ ನೀಡಿದ ಹೆಬ್ಬಾಳಕರ್, ಅನಗತ್ಯವಾಗಿ ಹೊರಗಡೆ ಬರದೇ, ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಜರ್ ಗಳ ಬಳಕೆ​ ಮಾಡುವ ಮೂಲಕ ಆದಷ್ಟು ಬೇಗ ಕೊರೋನಾ ಮುಕ್ತವನ್ನಾಗಿಸಿ ನೆಮ್ಮದಿಯ ಜೀವನವನ್ನು ನಡೆಸಬೇಕಿದೆ​ ಎಂದು ಸಾರ್ವಜನಿಕರಲ್ಲಿ ವಿನಂತಿಸಿದರು​.
ಇದೇ ಸಮಯದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತರ ಆರೋಗ್ಯದ ಬಗ್ಗೆ ವಿಚಾರಿಸಿ, ಅವರ ಕುಂದುಕೊರತೆಗಳ ಬಗ್ಗೆ ಆಲಿಸಿ, ಸರ್ಕಾರದಿಂದ ಸಿಗಲಾಗುವ ಎಲ್ಲ ಪ್ರಯೋಜ‌ಗಳನ್ನು ಮಾಡಿಕೊಡುವುದಾಗಿ ​ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button