ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಈ ಸಾಲಿನ ಪಿಯುಸಿ ಪರೀಕ್ಷೆ ರದ್ದುಪಡಿಸಲಾಗಿದೆ. ಎಸ್ ಎಸ್ ಎಲ್ ಸಿಗೆ ತಲಾ 3 ವಿಷಯಗಳ 2 ದಿನದ ಪರೀಕ್ಷೆಗಳನ್ನು ಮಾತ್ರ ನಡೆಸಲಾಗುತ್ತದೆ.
ಶಿಕ್ಷಣ ಸಚಿವ ಸುರೇಶ ಕುಮಾರ ಈ ವಿಷಯ ಪ್ರಕಟಿಸಿದ್ದಾರೆ. ಪಾಲಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಒಟ್ಟಾಭಿಪ್ರಾಯದ ಮೇರೆಗೆ ಈ ವರ್ಷ ಪಿಯುಸಿ ಪರೀಕ್ಷೆ ರದ್ದುಪಡಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸುರೇಶ ಕುಮಾರ ತಿಳಿಸಿದ್ದಾರೆ.
ಆದರೆ ಎಸ್ಎಸ್ ಎಲ್ ಸಿಗೆ 3 -3 ವಿಷಯಗಳ ಪರೀಕ್ಷೆಗಳನ್ನು 2 ದಿನ ಮಾತ್ರ ನಡೆಸಲಾಗುತ್ತದೆ. ಒಂದು ದಿನ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ. ಮತ್ತೊಂದು ದಿನ ಇತರ ವಿಷಯಗಳ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಸರಳವಾಗಿರುತ್ತದೆ. ಜುಲೈ 3ನೇ ವಾರ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯುವುದು. 6000 ಕೇಂದ್ರಗಳಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡಸಲಾಗುವುದು. ಯಾರನ್ನೂ ಫೇಲ್ ಮಾಡುವುದಿಲ್ಲ ಎಂದು ಸುರೇಶ ಕುಮಾರ ತಿಳಿಸಿದ್ದಾರೆ.
ತಮ್ಮ ಮನೆಯ ಸಮೀಪ ಇರುವ ಪರೀಕ್ಷೆ ಕೇಂದ್ರದಲ್ಲೇ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆಯ್ಕೆ ಮಾಡಲು ಅವಕಾಶ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಬಿಮ್ಸ್ ಗೆ ಚಿಕಿತ್ಸೆ ನೀಡಲು ಇಂದು ಬೆಳಗಾವಿಗೆ ಯಡಿಯೂರಪ್ಪ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ