ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವ್ಯಾಸಂಗ ಅಥವಾ ಉದ್ಯೋಗ ನಿಮಿತ್ಯ ವಿದೇಶಕ್ಕೆ ತೆರಳಲಿರುವ 18 ರಿಂದ 45 ವರ್ಷದೊಳಗಿನವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಆದೇಶದಂತೆ, ವಿದೇಶಿ ವ್ಯಾಸಂಗ ಹಾಗೂ ಉದ್ಯೋಗವನ್ನರಸಿ ವಿದೇಶಕ್ಕೆ ತೆರಳುವವರನ್ನು ಆದ್ಯತಾ ಗುಂಪಿನಲ್ಲಿ ಸೇರಿಸಿ, ಲಸಿಕೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಆದ್ದರಿಂದ, ಜಿಲ್ಲೆಯ 18 ರಿಂದ 45 ವರ್ಷದೊಳಗಿನವರು ವ್ಯಾಸಂಗ ಅಥವಾ ಉದ್ಯೋಗದ ನಿಮಿತ್ತ ವಿದೇಶಕ್ಕೆ ತೆರಳುತ್ತಿದ್ದಲ್ಲಿ, ಅದರ ಬಗ್ಗೆ ಸೂಕ್ತ ದಾಖಲೆಗಳೊಂದಿಗೆ ಆಯಾ ತಾಲೂಕಿನ, ತಾಲೂಕು ಆರೋಗ್ಯಾಧಿಕಾರಿಗಳ ಮೇಲರುಜುವನ್ನು ಅನುಬಂಧ-3 ರಲ್ಲಿ ಪಡೆದುಕೊಳ್ಳಬೇಕು ಮತ್ತು ಆಯಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಲಸಿಕೆಯ ಲಭ್ಯತೆಗೆ ಅನುಗುಣವಾಗಿ ಲಸಿಕೆಯನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ