Latest

ಸಿಇಟಿಗೆ ದಿನಾಂಕ ನಿಗದಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ ನಿಗದಿಯಾಗಿದ್ದು, ಆಗಸ್ಟ್ 28, 29ರಂದು ಪರೀಕ್ಷೆ ನಡೆಸಲಾಗುತ್ತಿದ್ದು ಈ ಹಿಂದಿನಂತೆಯೇ ಪರೀಕ್ಷೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಡಾ.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಸಿಇಟಿ ಬಗ್ಗೆ ಇಂದು ನಡೆದ ಸಭೆ ಬಳಿಕ ಮಾತನಾಡಿದ ಸಚಿವರು, ಎಲ್ಲಾ ಕೋರ್ಸ್ ಗಳಿಗೂ ಸಿಇಟಿ ಅಂಕ ಪರಿಗಣಿಸಲು ನಿರ್ಧರಿಸಲಾಗಿದೆ. ಜೂನ್ 15ರಿಂದ ಸಿಇಟಿ ನೋಂದಣಿ ಆರಂಭವಾಗಲಿದ್ದು, ಆಗಸ್ಟ್ 28 ಹಾಗೂ ಆಗಸ್ಟ್ 29ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಮೊದಲ ದಿನ ಗಣಿತ, ಜೀವಶಾಸ್ತ್ರ ಪರೀಕ್ಷೆಗಳು ನಡೆಯುತ್ತದೆ. ಎರಡನೇ ದಿನ ರಸಾಯನಶಾಸ್ತ್ರ, ಬೌತಶಾಸ್ತ್ರ ಪರೀಕ್ಷೆ ನಡೆಯಲಿದೆ. 3ನೇ ದಿನ ಆಗಸ್ಟ್ 30ರಂದು ಗಡಿನಾಡ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

Home add -Advt

ಪುರಸಭೆ ಅಧ್ಯಕ್ಷೆ ಪತಿ ಬಂಧನ

Related Articles

Back to top button