ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭಾರತದ ನೂತನ ಚುನಾವಣಾ ಆಯುಕ್ತರಾಗಿ ಅನೂಪ್ ಚಂದ್ರಪಾಂಡೆ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ನಿವೃತ್ತ ಐಎಎಸ್ ಅಧಿಕಾರಿಯಾಗಿರುವ ಅನೂಪ್ ಅವರನ್ನು ಚುನಾವಣಾ ಆಯೋಗದ ನೂತನ ಆಯುಕ್ತರನ್ನಾಗಿ ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ ಹೊರಡಿಸಿದ್ದರು. ಇದೀಗ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದು, ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹಾಗೂ ರಾಜೀವ್ ಕುಮಾರ್ ಪಾಂಡೆ ಅವರೊಂದಿಗೆ ಕಾರ್ಯನಿರ್ವಹಿಸಲಿದ್ದಾರೆ.
ಭಾರತೀಯ ಆಡಳಿತ ಸೇವೆಯ 1984ರ ಕೇಡರ್ ನ ಅಧಿಕಾರಿಯಾಗಿದ್ದ ಅನೂಪ್ ಚಂದ್ರಪಾಂಡೆ ಅವರು 2019 ಆಗಸ್ಟ್ ನಲ್ಲಿ ಉತ್ತರ ಪ್ರದೇಶ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿದ್ದರು.
ಪ್ರಯಾಣಿಕರ ಸುರಕ್ಷತೆ: ಕೆಎಸ್ಆರ್ ಟಿಸಿ ಬಸ್ ಗಳಿಗೆ ವಿನೂತನ ತಂತ್ರಜ್ಞಾನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ