ಪ್ರಗತಿವಾಹಿನಿ ಸುದ್ದಿ, ಮಾಂಜರಿ (ಚಿಕ್ಕೋಡಿ) : ಚಿಕ್ಕೋಡಿತಾಲೂಕಿನ ನದಿಗಳಿಗೆ ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದೀತೀರದಲ್ಲಿ ಮುಂಜಾಗ್ರತಾ ಕ್ರಮವಾಗಿ ಎನ್.ಡಿ.ಆರ್.ಎಫ್ ತಂಡ ನಿಯೋಜನೆ ಮಾಡಲಾಗಿದೆ.
ಕೊರೊನಾ ಆತಂಕದ ನಡುವೆಯೂ ಚಿಕ್ಕೋಡಿ ತಾಲೂಕಿನ ನದಿಗಳಿಗೆ ಪ್ರವಾಹದ ಪರಿಸ್ಥಿತಿ ಎದುರಾಗುತ್ತಿದೆ. ಹೀಗಾಗಿ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಮುಂಜಾಗ್ರತಾ ಕ್ರಮವಾಗಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಿದೆ. ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ೨೧ ಜನರ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜಿಸಲಾಗಿದೆ.
ಯಡೂರ ಗ್ರಾಮಕ್ಕೆ ಈ ಎನ್ ಡಿ ಆರ್ಎಫ್ತಂಡ ಆಗಮಿಸಿದೆ. ಇಲ್ಲಿಯ ಸಿದ್ಧ ತೀರ್ಥಯಾತ್ರಿ ನಿವಾಸದಲ್ಲಿ ಬೀಡುಬಿಟ್ಟಿದ್ದಾರೆ. ಸದ್ಯ ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಪ್ರಾರಂಭವಾಗಿದೆ. ಹೀಗಾಗಿ ಚಿಕ್ಕೋಡಿ ತಾಲೂಕಿನ ಕೃಷ್ಣಾ, ವೇದಗಂಗಾ, ದೂಧಗಂಗಾ ನದಿಗಳಿಗೆ ಸಣ್ಣ ಪ್ರಮಾಣದಲ್ಲಿ ನೀರು ಏರಿಕೆಯಾಗುತ್ತಿದೆ. ಇದು ಪ್ರವಾಹದ ಮುನ್ಸೂಚನೆಯನ್ನು ನೀಡುತ್ತಿದ್ದು, ಈ ಕಾರಣಕ್ಕಾಗಿ ಯಾವುದೇ ಪ್ರಾಣ ಹಾನಿ ಆಗದಂತೆ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಮುಂಜಾಗ್ರತಾಕ್ರಮವಾಗಿ ಈ ರಾಷ್ಟ್ರೀಯ ವಿಪತ್ತು ನಿರ್ವಹಣಾತಂಡವನ್ನು ನಿಯೋಜಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಅಗತ್ಯ ; ಉಸ್ತುವಾರಿ ಸಚಿವರ ಹೇಳಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ