ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಲಾಕ್ ಡೌನ್ ಮುಂದುವರಿಸುವ ಅಥವಾ ಅನ್ ಲಾಕ್ ಆರಂಭಿಸುವ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸರಣಿ ಸಭೆಗಳನ್ನು ನಡೆಸಲಿದ್ದಾರೆ.
ಬೆಳಗ್ಗೆ 11.30ಕ್ಕೆ ಜಿಲ್ಲಾಡಳಿತಗಳೊಂದಿಗೆ ವಿಡೀಯೋ ಸಂವಾದ ನಡೆಸಲಿದ್ದಾರೆ. ಬೆಳಗಾವಿ, ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಮಂಡ್ಯ ಹಾಗೂ ಚಿಕ್ಕಮಗಳೂರು ಜಿಲ್ಲೆಗಳು ಇದರಲ್ಲಿ ಭಾಗವಹಿಸಲಿವೆ.
ಸಂಜೆ 4.30ಕ್ಕೆ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ. ಇದಾದ ನಂತರ ಸಂಜೆ 6 ಗಂಟೆಗೆ ಸಂಬಂಧ ಪಟ್ಟ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಈ ಮೂರೂ ಸಭೆಗಳ ಬಳಿಕ ಅವರು ಅನ್ ಲಾಕ್ ಪ್ರಕ್ರಿಯೆ ಆರಂಭಿಸುವ ಕುರಿತು ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಬೆಳಗಾವಿ ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಶೇ.10ಕ್ಕಿಂತ ಹೆಚ್ಚಾಗಿದೆ. ಹಾಗಾಗಿ ಈ ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಸುವ ಸಾಧ್ಯತೆ ಇದೆ. ಕೆಲವು ಮಟ್ಟಿಗೆ ನಿಯಮ ಸಡಿಲಗೊಳಿಸಬಹುದು. ಇತರ ಜಿಲ್ಲೆಗಳಲ್ಲಿ ಹಂತಹಂತವಾಗಿ ಅನ್ ಲಾಕ್ ಪ್ರಕ್ರಿಯೆ ಆರಂಭಿಸುವ ಸಾಧ್ಯತೆ ಇದೆ.
ಬೆಳಗಾವಿ ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಅಗತ್ಯ ; ಉಸ್ತುವಾರಿ ಸಚಿವರ ಹೇಳಿಕೆ
ಜೂನ್ 15ರಿಂದ ಶಿಕ್ಷಕರ ಹಾಜರಾತಿ: ಶಿಕ್ಷಕರ ಸಂಘಟನೆಗಳ ವಿರೋಧ
ಪ್ರವಾಹ ಮುನ್ನೆಚ್ಚರಿಕೆ: ನದಿ ತೀರಕ್ಕೆ ಬಂದಿಳಿದ ಎನ್.ಡಿ.ಆರ್.ಎಫ್ ತಂಡ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ