Latest

ರಾಜ್ಯ ಬಿಜೆಪಿಯಲ್ಲಿ ಮತ್ತೆ ಗೊಂದಲ; ಅರವಿಂದ ಬೆಲ್ಲದ್ ದೆಹಲಿ ಭೇಟಿ ಊಹಾಪೋಹ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ನಿನ್ನೆಯಷ್ಟೇ ಸಿಎಂ ಬಿ.ಎಸ್.ಯಡಿಯೂರಪ್ಪ ತೆರೆ ಎಳೆದಿದ್ದರೂ ಬಿಎಸ್ ವೈ ವಿರೋಧಿ ಬಣದಿಂದ ಮತ್ತೆ ತಂತ್ರಗಾರಿಕೆ ಆರಂಭವಾಗಿದೆ. ಬಿಜೆಪಿ ಹಿರಿಯ ಶಾಸಕ ಅರವಿಂದ್ ಬೆಲ್ಲದ್ ದೆಹಲಿಯಲ್ಲಿ ಬೀಡು ಬಿಟ್ಟಿದ್ದು ಕುತೂಹಲಕ್ಕೆ ಕಾರಣವಾಗಿದೆ.

ನಿನ್ನೆಯಷ್ಟೇ ಸಿಎಂ ಯಡಿಯೂರಪ್ಪ ಇನ್ನೂ 2 ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಹೇಳಿದ್ದರು. ಸಿಎಂ ಹೇಳಿಕೆ ಬೆನ್ನಲ್ಲೇ ಶಾಸಕ ಅರವಿಂದ್ ಬೆಲ್ಲದ್ ದೆಹಲಿಗೆ ದೌಡಾಯಿಸಿದ್ದು, ಖಾಸಗಿ ಹೋಟೆಲ್ ನಲ್ಲಿ ತಂಗಿದ್ದಾರೆ. ಇತ್ತೀಚಿನ ರಾಜಕೀಯ ಚಟುವಟಿಕೆ ಬೆನ್ನಲ್ಲೇ ಇದು ಶಾಸಕರ ಎರಡನೆ ಬಾರಿಯ ದೆಹಲಿ ಭೇಟಿಯಾಗಿದೆ.

Home add -Advt

ಜೂನ್ 16ರಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಲಿದ್ದು, ಅರುಣ್ ಸಿಂಗ್ ಭೇಟಿಗೂ ಮೊದಲೇ ಬೆಲ್ಲದ್ ದೆಹಲಿಗೆ ಪ್ರಯಾಣಿಸಿದ್ದಾರೆ. ಇದು ಪಕ್ಷದೊಳಗಿನ ಗೊಂದಲಕ್ಕೆ ಕಾರಣವಾಗಿದೆ.

ಕೊವಿಡ್ ಸಂಕಷ್ಟ ಎದುರಿಸಲು ಕೆಎಲ್ಇ ಆಸ್ಪತ್ರೆಯಲ್ಲಿ ಎಲ್ಲ ವ್ಯವಸ್ಥೆ

Related Articles

Back to top button