
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವೈದ್ಯರು, ಆರೋಗ್ಯ ಕಾರ್ಯಕರ್ತರ ಮೇಲಿನ ದಾಳಿ ಖಂಡಿಸಿ ಜೂನ್ 18ರಂದು ದೇಶಾದ್ಯಂತ ವೈದ್ಯರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಈ ಕುರಿತು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಅಧ್ಯಕ್ಷ ಡಾ.ಜೆ ಎ ಜಯಲಾಲ್ ಮಾಹಿತಿ ನೀಡಿದ್ದು, ಜೂನ್ 18ರಂದು ದೇಶಾದ್ಯಂತ ವೈದ್ಯರು ’ರಕ್ಷಕರನ್ನು ರಕ್ಷಿಸಿ’ ಘೋಷ ವಾಕ್ಯದಡಿಯಲ್ಲಿ ಕಪ್ಪು ಮಾಸ್ಕ್, ಪಟ್ಟಿ, ಕಪ್ಪು ಶರ್ಟ್ ಧರಿಸಿ ಕರ್ತವ್ಯಕ್ಕೆ ಹಾಜರಾಗುವ ಮೂಲಕ ಪ್ರತಿಭಟನೆಗೆ ಮುಂದಾಗಿರುವುದಾಗಿ ತಿಳಿಸಿದರು.
ಕೋವಿಡ್ ನಂತಹ ಸಂಕಷ್ಟದ ಸಂದರ್ಭದಲ್ಲಿ ಹಲವೆಡೆಗಳಲ್ಲಿ ವೈದ್ಯರ ಮೇಲೆ ದಾಳಿ ಪ್ರಕರಣಗಳು ನಡೆಯುತ್ತಿವೆ. ಜೀವ ರಕ್ಷಕರಾದ ವೈದ್ಯರೇ ಜೀವ ಭಯದಲ್ಲಿ ಚಿಕಿತ್ಸೆ ನೀಡಬೇಕಾದ ವಾತಾವರಣ ನಿರ್ಮಾಣವಾಗಿದೆ. ವೈದ್ಯರ ಮೇಲೆ ದಾಳಿ ನಡೆಸಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ವೈದ್ಯರು ಭಯವಿಲ್ಲದ ವಾತಾವರಣದಲ್ಲಿ ಮಾನಸಿಕ ಒತ್ತಡವಿಲದೇ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಬೇಕು. ಅಲ್ಲದೇ ವೈದ್ಯರು ಕೂಡ ಕೋವಿಡ್ ಸೋಂಕಿಗೆ ಬಲಿಯಾಗುತ್ತಿದ್ದು, ಕೇಂದ್ರ ಸರ್ಕಾರ ನಿಟ್ಟಿನಲ್ಲಿಯೂ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಲಂಚಪಡೆಯುವಾಗ ಸಿಕ್ಕಿಬಿದ್ದ ಎಎಸ್ಐ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ