ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಾದಾಮಿ ಬಿಟ್ಟು ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆಯೇ ಎಂಬ ಕುತೂಹಕ್ಕೆ ಇದೀಗ ಸ್ವತ: ಸಿದ್ದರಾಮಯ್ಯನವರೇ ಉತ್ತರ ನೀಡೀದ್ದಾರೆ
ಬೆಂಗಳೂರಿನಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಆಯೋಜಿಸಿದ್ದ ಪೌರ ಕಾರ್ಮಿಕರಿಗೆ ಫುಡ್ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧೆ ವಿಚಾರ ಪ್ರಸ್ತಾಪಿಸಿದರು. ನಾನು ಪದೇ ಪದೇ ಚಾಮರಾಜಪೇಟೆಗೆ ಭೇಟಿ ನೀಡುತ್ತಿರುವುದರಿಂದ ಹಲವರು ಮುಂದಿನ ಚುನಾವಣೆಯಲ್ಲಿ ಚಾಮರಾಜಪೇಟೆಯಿಂದ ಸ್ಪರ್ಧಿಸಲಿದ್ದೀರಾ ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ ನನಗೆ ಅಂತಹ ಯೋಚನೆ ಇಲ್ಲ ಎಂದರು.
ನಾನು ಬಾದಾಮಿ ಕ್ಷೇತ್ರದಿಂದ ಆಯ್ಕೆಯಾಗಿದೇನೆ. ಹಾಗಾಗಿ ಅಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಹೇಳಿದರು. ಇದೇ ವೇಳೆ ಮಧ್ಯಪ್ರವೇಶಿಸಿದ ಶಾಸಕ ಜಮೀರ್ ಅಹ್ಮದ್, ನೀವು ಚಾಮರಾಜಪೇಟೆಯಿಂದಲೆ ಸ್ಪರ್ಧಿಸಬೇಕು. ಇದು ಜನರ ಆಶಯ ಕೂಡ ಆಗಿದೆ ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇದು ಜಮೀರ್ ಅಹ್ಮದ್ ಅವರ ಔದಾರ್ಯ. ಈ ಬಗ್ಗೆ ನೋಡೋಣ. ಮುಂದಿನ ದಿನಗಳಲ್ಲಿ ಯೋಚಿಸಿ ನಿರ್ಧಾರ ಮಾಡೋಣ ಎಂದು ಹೇಳಿರು.
ದೇಶಾದ್ಯಂತ ವೈದ್ಯರ ಪ್ರತಿಭಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ