ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೋವಿಡ್-೧೯ ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಜೂನ್ ೨೧ರ ಬೆಳಿಗ್ಗೆ ೬ ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೋರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ ೭ ರ ಬೆಳಿಗ್ಗೆ ೬ ಗಂಟೆಯಿಂದ ಜೂನ್ ೧೪ ರ ಬೆಳಿಗ್ಗೆ ೬ ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿತ್ತು.
ಆದರೆ, ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ ಹೆಚ್ಚಳ ಕಂಡುಬರುತ್ತಿರುವುದರಿಂದ ಜೂನ್ ೧೪ ರ ಬೆಳಿಗ್ಗೆ ೬ ಗಂಟೆಯವರೆಗೆ ಇರುವ ನೀಷೆಧಾಜ್ಞೆಯನ್ನು ಜೂನ್ ೨೧ ರ ಬೆಳಿಗ್ಗೆ ೬ ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.
ಅವಶ್ಯಕ ಚಟುವಟಿಕೆಗಳು ಹಾಗೂ ತಾಲೂಕಾ ಮಟ್ಟದ ವಿಪತ್ತು ನಿರ್ವಹಣಾ ಸಮಿತಿಯಿಂದ ಪೂರ್ವಾನುಮತಿ ಪಡೆದುಕೊಂಡ ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುತ್ತದೆ.
ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ೧೮೮ ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳಾದ ಎಂ.ಜಿ.ಹಿರೇಮಠ ಅವರು ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿಯ 2 ಏರಿಯಾಗಳ ಸೀಲ್ ಡೌನ್ ಗೆ ಜಿಲ್ಲಾಧಿಕಾರಿ ಆದೇಶ
ಬೆಳಗಾವಿ ಸೇರಿ 11 ಜಿಲ್ಲೆಗಳಲ್ಲಿ ಇನ್ನಷ್ಟು ಕಠಿಣ ಲಾಕ್ ಡೌನ್; ಉಳಿದೆಡೆ ಸಡಿಲಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ