ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇಲ್ಲಿಯ ಟಿಳಕವಾಡಿಯಲ್ಲಿರುವ ಅಪಾರ್ಟ್ ಮೆಂಟ್ ಒಂದರಲ್ಲಿ ಇಬ್ಬರು ಮಕ್ಕಳು ಸೇರಿದಂತೆ 7 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಮುಂಜಾಗೃತಾ ಕ್ರಮವಾಗಿ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ.
ಟಿಳಕವಾಡಿಯ ರಾಯ್ ರೋಡ್ ನ ಶ್ರೀಗಂಧ ಅಪಾರ್ಟ್ ಮೆಂಟ್ ನಲ್ಲಿ 7 ಜನರು ಕೋವಿಡ್ ನಿಂದ ಬಳಲುತ್ತಿದ್ದಾರೆ. ಒಂದೇ ಮನೆಯಲ್ಲಿ ನಾಲ್ವರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದರೆ, ಅಪಾರ್ಟ್ ಮೆಂಟ್ ನ ಮತ್ತೊಂದು ಮನೆಯ ಮೂವರಲ್ಲಿ ಸೋಂಕು ದೃಢಪಟ್ಟಿದೆ.
ಇಡೀ ಅಪಾರ್ಟ್ ಮೆಂಟ್ ನ್ನು ಪಾಲಿಕೆ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ. ಅಲ್ಲದೇ ಆರೋಗ್ಯಾಧಿಕಾರಿಗಳು ಅಪಾರ್ಟ್ ಮೆಂಟ್ ನಲ್ಲಿರುವ ಪ್ರತಿಯೊಬ್ಬರ ಸ್ವಾಬ್ ಕಲೆಕ್ಟ್ ಮಾಡಿದ್ದು, ಜನರಿಗೆ ಮುನ್ನೆಚ್ಚರಿಕೆಯಿಂದಿರುವಂತೆ ಸೂಚಿಸಿದ್ದಾರೆ.
ಈ ನಡುವೆ ವಾರ್ಡ್ ನಂ.53, 54ನ್ನು ಮೈಕ್ರೋಕಂಟೇನ್ಮೆಂಟ್ ಪ್ರದೇಶವೆಂದು ಗುರುತಿಸಲಾಗಿದ್ದು, ಜಿಲ್ಲಾಧಿಕಾರಿ ಸೂಚನೆಯಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಬೆಳಗಾವಿಯ 2 ಏರಿಯಾಗಳ ಸೀಲ್ ಡೌನ್ ಗೆ ಜಿಲ್ಲಾಧಿಕಾರಿ ಆದೇಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ