Latest

ಕೆಸಿಎನ್ ಚಂದ್ರಶೇಖರ್ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸಂಕಷ್ಟಗಳ ನಡುವೆ ಕನ್ನಡ ಚಿತ್ರರಂಗಕ್ಕೆ ಮೇಲಿಂದ ಮೇಲೆ ಹೊಡೆತ ಬೀಳುತ್ತಿದೆ. ಖ್ಯಾತ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.

ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

Home add -Advt

ವರನಟ ಡಾ.ರಾಜ್ ಕುಮಾರ್ ನಟನೆಯ ‘ಹುಲಿ ಹಾಲಿನ ಮೇವು’, ‘ಬಬ್ರವಾಹನ’ ಮುಂತಾದ ಚಿತ್ರಗಳಿಗೆ ಬಂಡವಾಳ ಹೂಡಿದ್ದ ಕೆಸಿಎನ್ ಚಂದ್ರಶೇಖರ್ ಕನ್ನಡ ಚಿತ್ರರಂಗದಲ್ಲಿ ಜನಪ್ರಿಯ ನಿರ್ಮಾಪಕರು. ಹಿರಿಯ ನಿರ್ಮಾಪಕನ ಅಗಲಿಕೆಗೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ.
ಬೆಳಗಾವಿಯಲ್ಲಿ ಕೊರೊನಾ ಮರೆತ ಜನ; ಮಾರುಕಟ್ಟೆಯಲ್ಲಿ ಜನಜಾತ್ರೆ

Related Articles

Back to top button