ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಜುಲೈ 3ನೇ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಲಿವೆ. ಈ ಪರೀಕ್ಷೆಯಲ್ಲಿ ಸುಮಾರು 6 ಸಾವಿರ ಅಧಿಕಾರಿಗಳು, ಸಿಬ್ಬಂದಿ ಹಾಗೂ ಶಿಕ್ಷಕರು ಪಾಲ್ಗೊಳ್ಳುತ್ತಿದ್ದಾರೆ.
ಈ ಅಧಿಕಾರಿಗಳು, ಸಿಬ್ಬಂದಿ ಹಾಗೂ ಶಿಕ್ಷಕರು ಆತ್ಮಸ್ಥೈರ್ಯದಿಂದ ಕೆಲಸ ಮಾಡಲು ಅನುಕೂಲವಾಗುವಂತೆ ಅವರಿಗೆಲ್ಲ ಕೂಡಲೇ ಲಸಿಕೆ ಹಾಕಿಸಬೇಕೆಂದು ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಈ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ತಿಳಿಸಲಾಗಿದೆ.
ಶಿಕ್ಷಕರ ಬೆಂಬಲಕ್ಕೆ ನಿಂತ ನೌಕರರ ಸಂಘ: ಸಿಎಂ ಜೊತೆ ನಾಳೆ ಚರ್ಚೆ – ಷಡಕ್ಷರಿ ಭರವಸೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ