Latest

ಸಂಚಾರಿ ವಿಜಯ್ ಇನ್ನು ನೆನಪು ಮಾತ್ರ; ರವೀಂದ್ರ ಕಲಾ ಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ (38)ಕೊನೆಯುಸಿರೆಳೆದಿದ್ದಾರೆ. ನಾನು ಅವನಲ್ಲ ಅವಳು ಚಿತ್ರದ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ, ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದ ಭರವಸೆಯ ನಟನ ಅಗಲಿಕೆಗೆ ಇಡೀ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

ನಟ ಸಂಚಾರಿ ವಿಜಯ್ ಅಂತಿಮ ದರ್ಶನಕ್ಕೆ ರವೀಂದ್ರಕಲಾ ಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಬೆಳಿಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸಂಚಾರಿ ವಿಜಯ್ ಹುಟ್ಟೂರು ಚಿಕ್ಕಮಗಳೂರಿನ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ.

Home add -Advt

ಸಂಚಾರಿ ವಿಜಯ್ ನಿಧನಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಕಿಚ್ಚ ಸುದೀಪ್, ದರ್ಶನ್, ಜಗ್ಗೇಶ್, ಧನಂಜಯ್, ರಾಜಕೀಯ ಗಣ್ಯರಾದ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

 

Related Articles

Back to top button