ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲಂಚ ಪಡೆದ ಪ್ರಕರಣದಲ್ಲಿ ಅಮಾನತಾಗಿದ್ದ ಬೆಂಗಳೂರಿನ ಕೋಡಿಗೆಹಳ್ಳಿ ಠಾಣೆ ಎಎಸ್ ಐ ದಯಾನಂದ್ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ
ಬೆಂಗಳೂರಿನ ಯಲಹಂಕ ನ್ಯೂಟೌನ್ ನಲ್ಲಿರುವ ದಯಾನಂದ್ ಅವರ ನಿವಾಸದ ಮೆಲೆ 10ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಉದ್ಯಮಿಯೊಬ್ಬರಿಂದ 5 ಲಕ್ಷ ರೂಪಾಯಿ ಲಂಚ ಪಡೆದ ಬಗ್ಗೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಎಎಸ್ ಐ ದಯಾನಂದ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಅಲ್ಲದೇ ಎಸಿಬಿ ತನಿಖೆಗೂ ಪೊಲಿಸ್ ಆಯುಕ್ತರು ಆದೇಶಿಸಿದ್ದರು. ಇದರ ಬೆನ್ನಲ್ಲೇ ಇದೀಗ ದಯಾನಂದ್ ಮನೆ ಮೇಲೆ ದಾಳಿ ನಡೆದಿದೆ. ಪ್ರಕರಣ ಬೆಳಕಿಗೆ ಬಂದಾಗಿನಿಂದ ದಯಾನಂದ್ ತಲೆಮರೆಸಿಕೊಂಡಿದ್ದಾರೆ.
ಬೆಳಗಾವಿಯಲ್ಲಿ ಪೊಲೀಸರಿಗೇ ಹೊಡೆದ ಯುವಕರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ