ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡುವ ನಿಟ್ಟಿನಲ್ಲಿ ದೆಹಲಿಯಿಂದ ಹೊರಟಿದ್ದು, ಕೆಲವೇ ಸಮಯದಲ್ಲಿ ರಾಜ್ಯಕ್ಕೆ ಆಗಮಿಸಲಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್, ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದು, ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಏನೇ ಹೇಳುವುದಿದ್ದರೂ ಕರ್ನಾಟಕಕ್ಕೆ ಭೇಟಿ ನೀಡಿದ ಬಳಿಕವೇ ಮಾತನಾಡುತ್ತೇನೆ ಎಂದಿದ್ದಾರೆ.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೂರು ದಿನಗಳ ರಾಜ್ಯ ಭೇಟಿಗಾಗಿ ಆಗಮಿಸುತ್ತಿದ್ದು, ಬಿಜೆಪಿ ಬಂದಾಯಕ್ಕೆ ಮದ್ದೆರೆಯಲು ಯತ್ನಿಸಲಿದ್ದಾರೆ. ಸಚಿವರು, ಶಾಸಕರ ಅಭಿಪ್ರಾಯಗಳನ್ನು ಸಂಗ್ರಹಿಸಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ.
ಕೆಲವರು ಸಿಎಂ ಬದಲಾವಣೆಗೆ ಪ್ರಸ್ತಾಪಿಸಿದ್ದಾರೆ ಎಂದ ಈಶ್ವರಪ್ಪ…!
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ