
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪತ್ನಿಯ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದ ಪತಿ ಹೃದಯಾಘಾತದಿಂದ ವಿಧಿವಶರಾಗಿರುವ ಘಟನೆ ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಒಂದೇ ಗಂಟೆಯ ಅಂತರದಲ್ಲಿ ಪತಿ-ಪತ್ನಿ ಇಬ್ಬರೂ ಇಹಲೋಕ ತ್ಯಜಿಸಿದ್ದಾರೆ. 48 ವರ್ಷದ ರಜನಿ ಭರತ ಶಿಂಧೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪತ್ನಿ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಪತಿ ಭರತ ಶಿಂಧೆ(55) ಹೃದಯಾಘಾತದಿಂದ ಕುಸಿದುಬಿದ್ದಿದ್ದಾರೆ. ಸ್ಥಳದ್ದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮಕ್ಕಳು ಹಾಗೂ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.
ಬಿಜೆಪಿ ಭಿನ್ನಮತೀಯರಿಗೆ ದೊಡ್ಡ ಶಾಕ್ ನೀಡಿದ ಅರುಣ ಸಿಂಗ್
 
					 
				 
					 
					 
					 
					
 
					 
					 
					


