Latest

ಶಾಸಕ ಬೆಲ್ಲದ್ ಫೋನ್ ಕದ್ದಾಲಿಕೆ ಕೇಸ್; ಕಮೀಷ್ನರ್ ಮಾಹಿತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಕಮೀಷ್ನರ್ ಕಮಲ್ ಪಂತ್, ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಗೆ ಯುವರಾಜ ಸ್ವಾಮಿಯಿಂದ ಕರೆ ಬಂದಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಡಿಜಿ, ಐಜಿಪಿಯಿಂದ ಪತ್ರ ಬಂದಿದ್ದು, ಪತ್ರದ ಸೂಚನೆ ಮೇರೆಗೆ ಕರೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು.

Home add -Advt

ತಮ್ಮ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ. ಜೈಲಿನಲ್ಲಿರುವ ಯುವರಾಜ ಸ್ವಾಮಿ ಎಂಬಾತ ತನಗೆ ಕರೆ ಮಾಡಿದ್ದಾಗಿ ಶಾಸಕ ಬೆಲ್ಲದ್ ನಿನ್ನೆಯಷ್ಟೇ ಆರೋಪಿಸಿದ್ದರು. ಅಲ್ಲದೇ ಈ ಬಗ್ಗೆ ತನಿಖೆ ನಡೆಸುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಸ್ಪೀಕರ್ ಕಾಗೇರಿಗೆ ದೂರು ನೀಡಿದ್ದರು.

ಯಡಿಯೂರಪ್ಪ ಮತ್ತೆ ಜೈಲಿಗೆ ಹೋಗಬಾರದು: ಹೆಚ್.ವಿಶ್ವನಾಥ್ ಕಳಕಳಿ!
ಕೊಡಚಾದ್ರಿ ಬೆಟ್ಟಕ್ಕೆ ಸಿಮೆಂಟ್ ರಸ್ತೆ ಪ್ರಸ್ತಾವನೆ ತಿರಸ್ಕರಿಸಿ: ವನ್ಯಜೀವಿ ಕಾರ್ಯಕರ್ತರ ಆಗ್ರಹ

Related Articles

Back to top button