ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಏಳನೇಯ ಅಂತರರಾಷ್ಟ್ರೀಯ ಯೋಗ ದಿನದ ಹಿನ್ನಲೆಯಲ್ಲಿ ಜೂನ್ 21 ರಂದು ಅಂಚೆ ಪತ್ರಗಳ ಮೇಲೆ ಅಂತರಾಷ್ಟ್ರೀಯ ಯೋಗ ದಿನದ ವಿಶೇಷ ಚಿತ್ರಾತ್ಮಕ ಮುದ್ರೆಯನ್ನು ಒತ್ತುವ ಮೂಲಕ ಸಾರ್ವಜನಿಕರಲ್ಲಿ ಯೋಗ ದಿನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಳಗಾವಿ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಬೆಳಗಾವಿ, ಬೈಲಹೊಂಗಲ ಹಾಗೂ ರಾಮದುರ್ಗ ಪ್ರಧಾನ ಅಂಚೆ ಕಚೇರಿಯಲ್ಲಿ ಸ್ವೀಕೃತವಾಗುವ ಹಾಗೂ ಬಟವಡೆಯಾಗುವ ಎಲ್ಲಾ ಅಂಚೆ ಪತ್ರಗಳ ಮೇಲೆ ಅಂತರರಾಷ್ಟ್ರೀಯ ಯೋಗ ದಿನದ ವಿಶೇಷ ಚಿತ್ರಾತ್ಮಕ ಮುದ್ರೆಯನ್ನು ಒತ್ತಲಾಗುವುದು ಎಂದು ಅವರು ತಿಳಿಸಿದ್ದಾರೆ.
ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ್ದು ನಮ್ಮ ಹೆಮ್ಮೆಯ ಭಾರತ. ಯೋಗದ ಮಹತ್ವವನ್ನು ಅರಿತು ವಿಶ್ವ ಸಂಸ್ಥೆಯು 2015 ರಿಂದ ಜೂನ್ 21 ನ್ನು ಅಂತರರಾಷ್ಟ್ರೀಯ ಯೋಗ ದಿನ ಎಂದು ಘೋಷಿಸಿದೆ. ಆದ್ದರಿಂದ ಭಾರತೀಯ ಅಂಚೆ ಇಲಾಖೆ ವತಿಯಿಂದ ಪ್ರತಿ ವರ್ಷ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದೆ. ಅದೇ ರೀತಿ, ಈ ವರ್ಷವೂ ಸಹ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ವಿಶೇಷ ಚಿತ್ರಾತ್ಮಕ ಮುದ್ರೆಯನ್ನು ಒತ್ತಲಾಗುವುದು. ಆದ್ದರಿಂದ ಬೆಳಗಾವಿ ಜಿಲ್ಲೆಯ ಎಲ್ಲಾ ಅಂಚೆ ಚೀಟಿ ಸಂಗ್ರಹಿಸುವ ಹವ್ಯಾಸಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೆಳಗಾವಿ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗಮನಕ್ಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ