ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : 2021-22 ನೇ ಸಾಲಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇರ ಗುತ್ತಿಗೆ ಮೂಲಕ ಖಾಲಿ ಇರುವ ವಲಯಗಳಲ್ಲಿ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಸಮಗ್ರ ಶಿಕ್ಷಣ ಯೋಜನೆಯ ಸಮನ್ವಯ ಶಿಕ್ಷಣ ಮಧ್ಯವರ್ತನೆ ಚಟುವಟಿಕೆಯ ಅಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ವಿದ್ಯಾರ್ಹತೆ ಹೊಂದಿದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಂದ ಪ್ರಥಮ ಆದ್ಯತೆ ಮೇರೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ವಿಶೇಷ ಸಂಪನ್ಮೂಲ ಶಿಕ್ಷಕರು ತಮಗೆ ಸಂಬಂಧಿಸಿದ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಜೂನ್ 22 ರಂದು ಸಾಯಂಕಾಲ 5.30 ಗಂಟೆಯೊಳಗಾಗಿ ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಅಲ್ಲದೇ, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಂದ ಭರ್ತಿಯಾಗದೆ ಖಾಲಿ ಉಳಿದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ತಾತ್ಕಾಲಿಕವಾಗಿ ನೇರ ಗುತ್ತಿಗೆ ಮೂಲಕ ಇಲಾಖಾ ನಿಯಮಾನುಸಾರ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆದ್ದರಿಂದ, ವಿಶೇಷ ಡಿ.ಇಡಿ (ಪ್ರಾಥಮಿಕ) ಮತ್ತು ವಿಶೇಷ ಬಿ.ಇಡಿ (ಪ್ರೌಢ) ಪದವಿ ಪಡೆದಿರುವ, ಆರ್.ಸಿ.ಐ ಪ್ರಮಾಣ ಪತ್ರ ಹೊಂದಿದ ಆಸಕ್ತ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮಾಹಿತಿ ಸಹಿತ ವಿದ್ಯಾರ್ಹತೆ ಪ್ರಮಾಣ ಪತ್ರ ಮತ್ತು ಸಂಬಂಧಿಸಿದ ದಾಖಲೆ ಪತ್ರಗಳೊಂದಿಗೆ ಜೂನ್ 24 ರಂದು ಸಾಯಂಕಾಲ 5.30 ಗಂಟೆಯೊಳಗಾಗಿ ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಬೆಳಗಾವಿಯ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು,ಸಮಗ್ರ ಶಿಕ್ಷಣ ಕಛೇರಿಗೆ ಸಲ್ಲಿಸಬೇಕು.
ವಲಯವಾರು ಖಾಲಿ ಇರುವ ಹುದ್ದೆಗಳ ಮಾಹಿತಿ:
ಬೆಳಗಾವಿ ನಗರ ವಲಯದಲ್ಲಿ 02 ಪ್ರೌಢ ಹಾಗೂ 01 ಪ್ರಾಥಮಿಕ ಸಂಪನ್ಮೂಲ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅದೇ ರೀತಿ, ಬೆಳಗಾವಿ ಗ್ರಾಮೀಣ ವಲಯದಲ್ಲಿ 02 ಪ್ರೌಢ ಹಾಗೂ 01 ಪ್ರಾಥಮಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ.
ಕಿತ್ತೂರು ವಲಯದಲ್ಲಿ 02 ಪ್ರೌಢ , ಖಾನಾಪೂರ ವಲಯದಲ್ಲಿ 02 ಪ್ರೌಢ ಹಾಗೂ 01 ಪ್ರಾಥಮಿಕ ಸಂಪನ್ಮೂಲ ಶಿಕ್ಷಕರ ಹುದ್ದೆಗಳು ಖಾಲಿ ಇವೆ.
ರಾಮದುರ್ಗ ವಲಯದಲ್ಲಿ 02 ಪ್ರೌಢ ಶಿಕ್ಷಕರ ಹುದ್ದೆಗಳು ಸೇರಿದಂತೆ 05 ವಲಯಗಳಲ್ಲಿ ಒಟ್ಟು 10 ಪ್ರೌಢ ಹಾಗೂ 03 ಪ್ರಾಥಮಿಕ ಸಂಪನ್ಮೂಲ ಶಿಕ್ಷಕರ ಹುದ್ದೆಗಳು ಖಾಲಿ ಇವೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0831-2435232 ಕ್ಕೆ ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ