Latest

ಗುರುಪ್ರಸಾದ್ ಮೋಹಪಾತ್ರ ಕೊರೊನಾಗೆ ಬಲಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ, ಕೇಂದ್ರ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್ ಮೊಹಪಾತ್ರ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಕಳೆದ ಏಪ್ರಿಲ್ ನಲ್ಲಿ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ  ಫಲಕಾರಿಯಾಗದೇ ಇದೀಗ ಕೊನೆಯುಸಿರೆಳೆದಿದ್ದಾರೆ.

ಗುರುಪ್ರಸಾದ್ ಮೊಹಪಾತ್ರ ನಿಧನಕ್ಕೆ ಪ್ರಧಾನಿ ಮೋದಿ, ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಗುರುಪ್ರಸಾದ್ ಮೊಹಪಾತ್ರ 1986ರ ಬ್ಯಾಚ್ ನ ಗುಜರಾತ್ ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದರು. ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (ಎಎಐ) ದಲ್ಲಿಯೂ ಕಾರ್ಯನಿರ್ವಹಿಸಿದ್ದರು.

 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button