
ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಕೋವಿಡ್ ಕಾರಣಕ್ಕೆ ಸದ್ಯಕ್ಕೆ ಯಾವುದೇ ಚುನಾವಣೆಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಸಚಿವರು, ಕೊರೊನಾ ಎರಡನೆ ಅಲೆ ಕೊಂಚ ಇಳಿಕೆಯಾಗುತ್ತಿದೆ. ಆದರೆ ಮುಗಿದಿಲ್ಲ. ಈ ನಡುವೆ ಮೂರನೆ ಅಲೆ ಭೀತಿ ಕೂಡ ಎದುರಾಗಿದೆ ಹಾಗಾಗಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಡಿಸೆಂಬರ್ ವರೆಗೆ ನಡೆಸದಿರಲು ನಿರ್ಧರಿಸಲಾಗಿದೆ ಎಂದರು.
ಸೋಮವಾರ ಸಂಜೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದೇ ವೇಳೆ ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ. ಬಿಜೆಪಿ ಒಂದು ಕುಟುಂಬವಿದ್ದಂತೆ ರಾಜಕೀಯ ಪಕ್ಷ ಎಂದ ಮೇಲೆ ಸಣ್ಣಪುಟ್ಟ ಸಮಸ್ಯೆ ಸಾಮಾನ್ಯ. ರಾಷ್ಟ್ರೀಯ ನಾಯಕರು ಎಲ್ಲರೊಂದಿಗೆ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಿ ಹೋಗಿದ್ದಾರೆ ಎಂದರು
ಭಾರಿ ಮಳೆ: ಒಂದೆಡೆ ರಾಷ್ಟ್ರೀಯ ಹೆದ್ದಾರಿ ಕುಸಿತ; ಇನ್ನೊಂದೆ ಪ್ರವಾಹ ಭೀತಿ; ಜನಜೀವನ ಅಸ್ತವ್ಯಸ್ಥ