Latest

ಸಿಎಂ ನಾನು ಇಟ್ಟಂಥ ಹೆಜ್ಜೆಯನ್ನೇ ಇಡಲಿ; ಹೆಚ್ ಡಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೀರಾವರಿ ಇಲಾಖೆಯಲ್ಲಿ 20,000 ಕೋಟಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ತಕ್ಷಣ ತನಿಖೆಗೆ ಆದೇಶ ನೀಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

2006ರಲ್ಲಿ ಸಿಎಂ ಆಗಿದ್ದ ನನ್ನ ವಿರುದ್ಧ ಬಿಜೆಪಿ ನಾಯಕರೇ 150ಕೋಟಿ ಗಣಿ ಲಂಚ ಆರೋಪ ಮಾಡಿದ್ದರು. ಸರ್ಕಾರದ ಪಾಲುದಾರ ಪಕ್ಷದವರೇ ದೂರಿದ್ದರಿಂದ ನಾನು ಅದನ್ನು ಲೋಕಾಯುಕ್ತಕ್ಕೆ ವಹಿಸಿ ಪಾರದರ್ಶಕತೆ ಕಾದುಕೊಂಡಿದ್ದೆ. ಈಗಿನ ಸರ್ಕಾರದ ವಿರುದ್ಧ ಸ್ವಪಕ್ಷೀಯರೇ 20000ಕೋಟಿ ನೀರಾವರಿ ಕಿಕ್‌ಬ್ಯಾಕ್‌ ಆರೋಪ ಮಾಡಿದ್ದಾರೆ. ಈಗ ತನಿಖೆಗೆ ಆದೇಶ ನೀಡದೇ ಮೌನವಾಗಿರುವುದೇಕೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮೈತ್ರಿ ಸರ್ಕಾರವನ್ನು ರಾಕ್ಷಸ ಸರ್ಕಾರ ಎಂದು ಆರೋಪಿಸಿ ಆ ಸರ್ಕಾರ ಕೆಡವಿ ಅತ್ಯಂತ ಸಜ್ಜನ, ಸ್ವಚ್ಛ ಸರ್ಕಾರವನ್ನು ಪ್ರತಿಷ್ಠಾಪಿಸಿದವರೇ ಈ ಆರೋಪ ಮಾಡಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. ಸಿಎಂ 2006ರಲ್ಲಿ ನಾನು ಇಟ್ಟಂಥ ಹೆಜ್ಜೆಯನ್ನೇ ಇಟ್ಟು ತಾವು ಪ್ರಾಮಾಣಿಕ ಎಂಬುದನ್ನು ಸಾಬೀತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಭ್ರಷ್ಟಾಚಾರದ ಆರೋಪದಲ್ಲಿ ಅನ್ಯರ ಹಸ್ತಕ್ಷೇಪದ ಆರೋಪವಿದೆ. ಆಡಳಿತದಲ್ಲಿ, ಸರ್ಕಾರದ ಹಂತದಲ್ಲಿ ಮುಖ್ಯಮಂತ್ರಿಗಳ ಕುಟುಂಬಸ್ಥರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಜನರ ಸೇವೆಯಲ್ಲಿ ತೊಡಗಿರುವ ಸರ್ಕಾರದಲ್ಲಿ ಸಂಬಂಧವೇ ಇಲ್ಲದವರ ಹಸ್ತಕ್ಷೇಪ ಸರಿಯಲ್ಲ. ಹೀಗಾಗಿ ಅನ್ಯರ ಹಸ್ತಕ್ಷೇಪದ ವಿಚಾರದಲ್ಲಿಯೂ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಕೋವಿಡ್ ಡೆತ್ ಆಡಿಟ್; ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button