ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶೇ.5ರಷ್ಟು ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ ಇರುವ 16 ಜಿಲ್ಲೆಗಳಲ್ಲಿ ಜೂನ್ 21ರಿಂದ ಅನ್ ಲಾಕ್ 2.0 ಜಾರಿಗೊಳಿಸುತ್ತಿದ್ದು, ಬಸ್ ಸಂಚಾರ, ವಾಣಿಜ್ಯ ಚಟುವಟಿಕೆ ಸೇರಿದಂತೆ ಹಲವು ಚಟುವಟಿಕೆಗಳಿಗೆ ಸರ್ಕಾರ ಅವಕಾಶ ನಿಡಿದೆ.
ಬೆಳಗಾವಿ, ಉತ್ತರ ಕನ್ನಡ, ಬೆಂಗಳೂರು ನಗರ, ಕೊಪ್ಪಳ, ಚಿಕ್ಕಬಳ್ಳಾಪುರ, ರಾಯಚೂರು, ಬಾಗಲಕೋಟೆ, ಮಂಡ್ಯ, ರಾಮನಗರ, ತುಮಕೂರು, ಗದಗ, ಕಲಬುರ್ಗಿ, ಹಾವೇರಿ, ಯಾದಗಿರಿ, ಬೀದರ್, ಕೋಲಾರ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿದ್ದು, ಯಾವುದಕ್ಕೆಲ್ಲ ಅನುಮತಿ ನೀಡಲಾಗಿದೆ, ಯಾವುದಕ್ಕೆ ಅನುಮತಿ ಇಲ್ಲ ಎಂಬ ಬಗ್ಗೆ ಇಲ್ಲಿದೆ ಮಾಹಿತಿ
ಯಾವುದಕ್ಕೆ ಅವಕಾಶ?:
ಜೂನ್ 21ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿ
ರಾಜ್ಯಾದ್ಯಂತ ಜುಲೈ 5ರವರೆಗೆ ಸಂಜೆ 7ರಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಹಾಗೂ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 5ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿ
ಅಂಗಡಿ ಮುಂಗಟ್ಟು ತೆರೆಯಲು ಬೆಳಿಗ್ಗೆ 6ರಿಂದ ಸಂಜೆ 5ಗಂಟೆವರೆಗೆ ಅವಕಾಶ
ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಶೇ.50ರಷ್ಟು ಸಿಬ್ಬಂದಿ ಕಾರ್ಯನಿರ್ವಹಣೆಗೆ ಅವಕಾಶ
ಬಟ್ಟೆ ಅಂಗಡಿ, ಮೊಬೈಲ್, ಎಲೆಕ್ಟ್ರಿಕ್ ಶಾಪ್ ವಾಹನ ಶೋರೂಂ ತೆರೆಯಲು ಅವಕಾಶ
ಹೋಟೆಲ್ ಗಳಲ್ಲಿ ಶೇ.50ರಷ್ಟು ಗ್ರಾಹಕರಿಗೆ ಕುಳಿತು ತಿನ್ನಲು ಅವಕಾಶ
ವಾಹನ ಖರೀದಿ ಮಾಡಲು ಅವಕಾಶ
ಬಸ್ ಸಂಚಾರಕ್ಕೆ ಅವಕಾಶ ಶೇ.50ರಷ್ಟು ಪ್ರಯಾಣಿಕರಿಗೆ ಅನುಮತಿ
ಜಿಮ್ ಗಳಿಗೆ ಶೇ 50ರಷ್ಟು ಸಾಮರ್ಥ್ಯ ಅವಕಾಶ
ಬೆಂಗಳೂರಿನಲ್ಲಿ ಮೆಟ್ರೋ ಸಂಚಾರಕ್ಕೆ ಶೇ.50ರಷ್ಟು ಪ್ರಯಾಣಿಕರಿಗೆ ಅನುಮತಿ
ಲಾಡ್ಜ್, ರೆಸಾರ್ಟ್ ಗಳಲ್ಲಿ ಶೇ.50ರಷ್ಟು ಸಾಮರ್ಥ್ಯಕ್ಕೆ ಅವಕಾಶ
ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ
ಯಾವುದಕ್ಕೆ ಅವಕಾಶವಿಲ್ಲ?:
ದೇವಸ್ಥಾನಗಳಿಗೆ ಭಕ್ತರಿಗೆ ಅವಕಾಶವಿಲ್ಲ, ಮಂದಿರ, ಮಸೀದಿ, ಚರ್ಚ್ ಗಳಿಗೆ ನಿರ್ಬಂಧ
ಶಿಕ್ಷಣ ಸಂಸ್ಥೆ, ಕ್ರೀಡಾಂಗಣ ಗಳಿಗೆ ನಿರ್ಬಂಧ
ರಾಜಕೀಯ ಸಭೆ ಸಮಾರಂಭ, ಧಾರ್ಮಿಕ ಕಾರ್ಯಕ್ರಮಗಳಿಗೆ ನಿರ್ಬಂಧ
ಸಿನಿಮಾ ಮಂದಿರ ತೆರೆಯಲು, ಶಾಪಿಂಗ್ ಮಾಲ್, ಕಾಂಪ್ಲೆಕ್ಸ್ ಗಳನ್ನು ತೆರೆಯಲು ಅವಕಾಶವಿಲ್ಲ.
ಸಮಗ್ರ ಆದೇಶಕ್ಕೆ ಇಲ್ಲಿ ಕ್ಲಿಕ್ ಮಾಡಿ – Revised Extension of Guidelines Unlock 2.0
ಬೆಳಗಾವಿ ಸೇರಿದಂತೆ 16 ಜಿಲ್ಲೆಗಳಲ್ಲಿ ಸೋಮವಾರದಿಂದ ಅನ್ ಲಾಕ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ