ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜುಲೈ 3ನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಸ್ಒಪಿ ಬಿಡುಗಡೆ ಮಾಡಿದ್ದಾರೆ.
ಕೊರೊನಾ ಸೋಂಕು ಇಳಿಮುಖವಾಗುತ್ತಿದ್ದು,ಈಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಶಿಕ್ಷಕರು, ಸಿಬ್ಬಂದಿ ಮತ್ತು ಅಧಿಕಾರಿಗಳು ಸಿದ್ಧತೆ ನಡೆಸಬೇಕು ಎಂದು ಸೂಚಿಸಿದ್ದಾರೆ.
ಶಿಕ್ಷಕರು, ಸಿಬ್ಬಂದಿಗಳು ಕಡ್ಡಾಯವಾಗಿ ಒಂದು ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು. ಪ್ರತಿ ಪರೀಕ್ಷೆ ಆರಂಭಕ್ಕೂ ಮುನ್ನ ಹಾಗೂ ಪರೀಕ್ಷೆ ನಂತರ ಪರೀಕ್ಷಾ ಕೇಂದ್ರ, ಕೊಠಡಿ, ಪೀಠೋಪಕರಣ ಮತ್ತು ಶೌಚಾಲಯಗಳ ಸ್ಯಾನಿಟೈಜೇಷನ್ ಮಾಡಿರಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಕೈಗೆ ಸ್ಯಾನಿಟೈಜ್ ಕಡ್ಡಾಯವಾಗಿದ್ದು, ಒಂದು ಡೆಸ್ಕ್ ಗೆ ಓರ್ವ ವಿದ್ಯಾರ್ಥಿಯಂತೆ ಪರೀಕ್ಷಾ ಕೊಠಡಿಯಲ್ಲಿ 12 ಪರಿಕ್ಷಾರ್ಥಿಗಳಿಗೆ ಮಾತ್ರ ಅವಕಾಶ ಗ್ರಾಮೀಣ ವಿಭಾಗದ ಅಭ್ಯರ್ಥಿಗಳು ಸಾಧ್ಯವಾದಷ್ಟು ತಾಲೂಕು ಕೇಂದ್ರಗಳಿಗೆ ಹೋಗದಂತೆ ಪರೀಕ್ಷಾ ಕೇಂದ್ರಗಳನ್ನು ರಚಿಸುವುದು, ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನರ್, ಪಲ್ಸ್ಆಕ್ಸಿಮೀಟರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಕಡ್ಡಾಯ ಹಾಗೂ ಕೋವಿಡ್ ಪಾಸಿಟೀವ್ ಬಂದ ಪರೀಕ್ಷಾರ್ಥಿಗಳಿಗೆ ವಿಶೇಷ ಕೋವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆಗೆ ವ್ಯವಸ್ಥೆ ಸೇರಿದಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನೀಡಿದ ಹೊಸ ಮಾರ್ಗಸೂಚಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ತಯಾರಿ ನಡೆಸುವಂತೆ ಸೂಚಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ