ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ 2ನೇ ಅಲೆಯ ಹಿನ್ನೆಲೆಯಲ್ಲಿ ಮೋಟಾರು ವಾಹನಗಳಿಗೆ ಶೇ.50ರಷ್ಟು ತೆರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿರುವುದರಿಂದ, ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 16(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿ ನೊಂದಾಯಿಸಿರುವ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಜೂನ್ 2021ರ ಮಾಹೆಗೆ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯ ಶೇಕಡ 50 ರಷ್ಟಕ್ಕೆ ವಿನಾಯಿತಿ ನೀಡಲಾಗಿದೆ ಎಂದು ಸಾರಿಗೆ ಸಚಿವರು ಮಾಹಿತಿ ನೀಡಿದ್ದಾರೆ.
SSLC ಪರೀಕ್ಷೆ: ಮಾರ್ಗಸೂಚಿ ಪ್ರಕಟ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ